ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ ಮಂಡಿಸಲಿದ್ದಾರೆ. ಬ್ಯಾಂಕಿಂಗ್ ನಿಯಂತ್ರಣ ಕಾಯಿದೆಯ ಜೊತೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ-1934 ಅನ್ನೂ ಅವರು ಮಂಡಿಸುವರು.
ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ-2024, ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆ-1934, ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ-1949, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಯಿದೆ-1955, ಬ್ಯಾಂಕಿಂಗ್ ಕಂಪನಿಗಳ (ಅಂಡರ್‌ಟೇಕಿಂಗ್‌ಗಳ ಸ್ವಾಧೀನ ಮತ್ತು ವರ್ಗಾವಣೆ) ಕಾಯಿದೆ-1970 ಮತ್ತು ಬ್ಯಾಂಕಿಂಗ್ ಕಂಪನಿಗಳು (ಅಂಡರ್‌ಟೇಕಿಂಗ್‌ಗಳ ಸ್ವಾಧೀನ ಮತ್ತು ವರ್ಗಾವಣೆ) ಕಾಯಿದೆ-1980 ಮಂಡಿಸಲಿದ್ದಾರೆ.
ಉದ್ದೇಶವೇನು?: ಈ ಮಸೂದೆಗಳು ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರ ಅಧಿಕಾರಾವಧಿ ಮತ್ತು ಕ್ಲೈಮ್ ಮಾಡದ ಹಣದ ಇತ್ಯರ್ಥಪಡಿಸುವಿಕೆಯ ಕುರಿತ ನಿಬಂಧನೆಯನ್ನು ಹೊಂದಿವೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ವೆ (ತಿದ್ದುಪಡಿ) ಮಸೂದೆ-2024 ಅನ್ನು ಮಂಡಿಸಲಿದ್ದಾರೆ. ರೈಲ್ವೆ ಕಾಯಿದೆ-1989ಕ್ಕೆ ತಿದ್ದುಪಡಿ ಜೊತೆಗೆ ರೈಲ್ವೇ ಮಂಡಳಿಯ ಅಧಿಕಾರಗಳನ್ನು ಹೆಚ್ಚಿಸಲು ಮತ್ತು ಕಾರ್ಯಾಚರಣೆ ದಕ್ಷತೆ ಸುಧಾರಣೆಯ ಗುರಿಯನ್ನು ಇದು ಹೊಂದಿದೆ.