ಶ್ರೀನಗರ(ಜಮ್ಮು ಕಾಶ್ಮೀರ):ಪೂಂಚ್‌ನ ಕೃಷ್ಣ ಘಾಟಿ ವಲಯದ ನಿಯಂತ್ರಣ ರೇಖೆಯ ಉದ್ದಕ್ಕೂ ಕಾಳ್ಗಿಚ್ಚು ಕಾಣಿಸಿಕೊಂಡಿದೆ. ಇದು ಈ ಪ್ರದೇಶದ ವಿಶಾಲವಾದ ಪರ್ವತ ಪ್ರದೇಶವನ್ನು ಆವರಿಸಿಕೊಂಡಿದೆ ಎಂದು ಸ್ಥಳೀಯ ಮೂಲಗಳು ವರದಿ ಮಾಡಿವೆ. ಈ ಕಾಳ್ಗಿಚ್ಚಿನಲ್ಲಿ ಅಪಾರ ಪ್ರಮಾಣದ ಹಸಿರು ವಲಯ ನಾಶವಾಗಿದೆ. ಇಷ್ಟೇ ಅಲ್ಲದೆ ಭೂಗತ ಗಣಿಗಳ ಸ್ಫೋಟದಿಂದ ಜನರು ಭಯಭೀತರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಜಮ್ಮು ಕಾಶ್ಮೀರದ ಪೊಲೀಸ್ ಪಡೆಗಳು, ಸೇನೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ವಿಭಾಗದ ತಂಡಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ ಎಂದು ತಿಳಿದು ಬಂದಿದೆ. ಅಗ್ನಿ ಕೆನ್ನಾಲಿಗೆಗೆ ತುತ್ತಾಗಿರುವ ಅರಣ್ಯದೊಳಗೆ, ಅತ್ತ ಕಡೆಯಿಂದ ಒಳನುಸುಳುವ ಯತ್ನಗಳನ್ನು ಸಹ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಒಳ ನುಸುಳುವ ಯತ್ನದ ಮೇಲೂ ತೀವ್ರ ನಿಗಾ ಇಡಲಾಗಿದೆ.