ಪಾಟ್ನಾ:ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಕೊನೆಯುಸಿರೆಳಿದಿದ್ದಾರೆ. ಸುಶೀಲ್ ಮೋದಿ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ರಾಜ್ಯಸಭಾ ಮಾಜಿ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಕ್ಯಾನ್ಸರ್ನಿಂದಾಗಿ ರಾಜಕೀಯದಿಂದ ಅವರು ದೂರ ಉಳಿದಿದ್ದರು.
ಸುಶೀಲ್ ಮೋದಿ ಅವರು ಜನವರಿ 5, 1952 ರಂದು ಪಾಟ್ನಾದಲ್ಲಿ ಜನಿಸಿದರು. ಬಿಹಾರದ ಮೂರನೇ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರೂ ಆಗಿ ಸೇವೆ ಸಲ್ಲಿಸಿದ್ದರು.