ಮುಂಬೈ (ಮಹಾರಾಷ್ಟ್ರ):ಸೈಕ್ಲಿಂಗ್ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಬ್ ಡಿಕ್ಕಿ ಹೊಡೆದ ಪರಿಣಾಮ ಇಂಟೆಲ್ ಇಂಡಿಯಾ ಮಾಜಿ ಮುಖ್ಯಸ್ಥ ಅವತಾರ್ ಸೈನಿ ಅವರು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ನವ ಮುಂಬೈ ಟೌನ್ಶಿಪ್ನಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ಮುಂಜಾನೆ 5.50ರ ಸುಮಾರಿಗೆ ನೆರೊಲ್ ಪ್ರದೇಶದ ಪಾಮ್ ಬೀಚ್ ರಸ್ತೆಯಲ್ಲಿ ಸೈನಿ(68) ಅವರು ತಮ್ಮ ಸಹ ಸೈಕ್ಲಿಸ್ಟ್ ಜೊತೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕ್ಯಾಬ್ ಹಿಂದಿನಿಂದ ಸೈನಿ ಅವರ ಬೈಸಿಕಲ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಚಾಲಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದನು. ಬೈಸಿಕಲ್ ಕ್ಯಾಬ್ನ ಮುಂಭಾಗದ ಚಕ್ರಗಳ ಕೆಳಗೆ ಸಿಕ್ಕಿಹಾಕಿಕೊಂಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಸೈನಿ ಅವರನ್ನು ಸಹ ಸೈಕ್ಲಿಸ್ಟ್ಗಳು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.