ಬನಸ್ಕಾಂತ(ಗುಜರಾತ್):ಮಾದಕ ವಸ್ತು ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ ಇಲ್ಲಿನ ಪಾಲನ್‌ಪುರ ನಗರದ ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಕ್ರಿಮಿನಲ್ ಪ್ರಕರಣದಲ್ಲಿ ಭಟ್‌ಗೆ ವಿಧಿಸಲಾದ ಎರಡನೇ ಶಿಕ್ಷೆ ಇದಾಗಿದೆ. ಮೊದಲನೆಯದು ಕಸ್ಟಡಿಯಲ್ಲಿದ್ದ ವ್ಯಕ್ತಿಯೊಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಜಾಮ್‌ನಗರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿತ್ತು.
''ನನ್ನ ಪತಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಕಳೆದುಕೊಂಡಿದ್ದೇನೆ. ಮುಂದಿನ ಹೋರಾಟ ಮಾಡುತ್ತೇವೆ. ಈ ಬಗ್ಗೆ ಉನ್ನತ ನ್ಯಾಯಾಲಯದ ಮೊರೆ ಹೋಗುತ್ತೇವೆ. ಅವರನ್ನು ಗೌರವಯುತವಾಗಿ ವಾಪಸ್ ಕರೆಸಿಕೊಳ್ಳುತ್ತೇವೆ'' ಎಂದು ಸಂಜೀವ್ ಭಟ್ ಪತ್ನಿ ಹೇಳಿದ್ದಾರೆ.