ನವದೆಹಲಿ:ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿಸೆಂಬರ್ 26 ರಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದು, ಅವರ ನಿಧನಕ್ಕೆ ದೇಶವೇ ಕಂಬನಿ ಮಿಡಿಯುತ್ತಿದೆ. ಭಾರತವನ್ನು ತಿರುಗಿ ನೋಡುವಂತೆ ಮಾಡಿದ ಆರ್ಥಿಕ ತಜ್ಞನ ಜೀವನ ಸಾಧನೆಯತ್ತ ಒಮ್ಮೆ ಮೆಲುಕು ಹಾಕೋಣ.
'ಸಿಂಗ್'ರ ರಾಜಕೀಯ ಚರಿತ್ರೆ : ಡಾ. ಮನಮೋಹನ್ ಸಿಂಗ್ ಅವರು 2004 ರಿಂದ 2014 ರವರೆಗೆ ಭಾರತದ ಪ್ರಧಾನಿಯಾಗಿದ್ದರು ಮತ್ತು ಸುಮಾರು 33 ವರ್ಷಗಳ ಕಾಲ ರಾಜ್ಯಸಭಾ ಸಂಸದರಾಗಿದ್ದರು. ಅವರು 1991 ರಲ್ಲಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾದರು ಮತ್ತು 1991 ರಿಂದ 1996 ರವರೆಗೆ ಅಂದಿನ ನರಸಿಂಹರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದರು. ಅವರು ಮೊದಲ ಬಾರಿಗೆ ದಕ್ಷಿಣ ದೆಹಲಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರು, ಆದರೆ, ಸಂಸತ್ತನ್ನು ತಲುಪಲು ಸಾಧ್ಯವಾಗಲಿಲ್ಲ. ಹೌದು, ಡಾ. ಮನಮೋಹನ್ ಸಿಂಗ್ ಅವರು ದೇಶದ ರಾಜಧಾನಿ ದೆಹಲಿಯಿಂದ ತಮ್ಮ ರಾಜಕೀಯ ಜೀವನದ ಮೊದಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದರು. ಆದರೆ, ಚುನಾವಣೆಯಲ್ಲಿ ಯಶಸ್ವಿಯಾಗಲು ಸಾಧ್ಯವಾಗಲಿಲ್ಲ. ಬಿಜೆಪಿ ಅಭ್ಯರ್ಥಿ ಪ್ರೊಫೆಸರ್ ವಿಜಯ್ ಕುಮಾರ್ ಮಲ್ಹೋತ್ರಾ ವಿರುದ್ಧ ಅವರು ಸೋಲನ್ನು ಎದುರಿಸಬೇಕಾಯಿತು.
1999 ರಲ್ಲಿ ಮೊದಲ ಲೋಕಸಭಾ ಚುನಾವಣೆ: 1999ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕೂಡ ದಕ್ಷಿಣ ದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ, ಅಂದಿನ ಬಿಜೆಪಿ ನಾಯಕ ಪ್ರೊಫೆಸರ್ ವಿಜಯ್ ಕುಮಾರ್ ಮಲ್ಹೋತ್ರಾ ಅವರನ್ನು 30 ಸಾವಿರ ಮತಗಳಿಂದ ಸಿಂಗ್ ಅವರನ್ನು ಸೋಲಿಸಿದ್ದರು. ಡಾ. ಮನಮೋಹನ್ ಸಿಂಗ್ ಅವರು 1991 ರಿಂದ ಸತತ ಐದು ಬಾರಿ ರಾಜ್ಯಸಭಾ ಸದಸ್ಯರಾಗಿದ್ದರು. ಆರನೇ ಬಾರಿಗೆ 3 ವರ್ಷಗಳ ಕಾಲ ರಾಜ್ಯಸಭಾ ಸಂಸದರಾದರು. ಒಟ್ಟಾರೆ, ರಾಜ್ಯಸಭೆಯಲ್ಲಿ ಅವರ ಅಧಿಕಾರಾವಧಿ 33 ವರ್ಷಗಳು.