ಕರ್ನಾಟಕ

karnataka

ETV Bharat / bharat

ಬೊಲೆರೊ - ಜೀಪ್ ನಡುವೆ ಭೀಕರ ಅಪಘಾತ; ನಾಲ್ವರು ಸಾವು - Road Accident - ROAD ACCIDENT

ರಾಜಸ್ಥಾನದ ಜೈಪುರದಲ್ಲಿ ಬೊಲೆರೊ ಮತ್ತು ಜೀಪ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ.

Vehicles crushed in an accident in Jaipur.
ಜೈಪುರದಲ್ಲಿ ನಡೆದ ಅಪಘಾತದಲ್ಲಿ ವಾಹನಗಳು ನಜ್ಜುಗುಜ್ಜಾಗಿವೆ. (ETV Bharat)

By ETV Bharat Karnataka Team

Published : May 16, 2024, 8:34 PM IST

ಜೈಪುರ (ರಾಜಸ್ಥಾನ):ಬೊಲೆರೊ ಮತ್ತು ಜೀಪ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಇನ್ನೂ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿನ ಆಂಧಿ ಪೊಲೀಸ್ ಠಾಣೆ ವ್ಯಾಪ್ತಿಯ ದಂಗರವಾಡ ಬಳಿಯ ಮನೋಹರಪುರ - ದೌಸಾ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ದೌಸಾ ನಿವಾಸಿಗಳು ಎಂದು ಗುರುತಿಸಲಾಗಿದೆ. ಮತ್ತೊಂದೆಡೆ, ಜೀಪಿನಲ್ಲಿ ಪ್ರಯಾಣಿಸುತ್ತಿದ್ದವರು ಉತ್ತರ ಪ್ರದೇಶದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಘಟನೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಹೆದ್ದಾರಿಯ ತಿರುವಿನಲ್ಲಿ ವೇಗವಾಗಿ ಬಂದ ಜೀಪ್ ಬೊಲೆರೊಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಎರಡೂ ವಾಹನಗಳು ನಜ್ಜುಗುಜ್ಜಾಗಿವೆ. ಅಲ್ಲದೇ, ಡಿಕ್ಕಿಯ ರಭಸಕ್ಕೆ ನಾಲ್ವರು ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಇವರನ್ನು ಜೈಪುರದ ರವಾನಿಸಲಾಗಿದೆ. ಮೃತ ದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಜಾಮ್ವರಾಮ್‌ಗಢದ ಡಿಎಸ್​ಪಿ ಪ್ರದೀಪ್ ಗೋಯಲ್ ಮಾಹಿತಿ ನೀಡಿದ್ದಾರೆ.

ಈ ಅಪಘಾತದ ಬಳಿಕ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಜಖಂಗೊಂಡಿದ್ದ ವಾಹನಗಳನ್ನು ಕ್ರೇನ್ ಸಹಾಯದಿಂದ ತೆರವುಗೊಳಿಸಲಾಗಿದೆ. ಇತರ ವಾಹನಗಳ ಸಂಚಾರ ಸುಗಮಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಧ್ಯ ಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ಪ್ರತ್ಯೇಕ ರಸ್ತೆ ಅಪಘಾತ; 18 ಮಂದಿ ಸಾವು

ABOUT THE AUTHOR

...view details