ನವದೆಹಲಿ:ದೆಹಲಿ ಬಿಜೆಪಿ ಸಂಸದ, ಭಾರತದ ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕ್ರಿಕೆಟ್ನಲ್ಲಿ ತೊಡಗಿಸಿಕೊಳ್ಳಲು ಬಯಸಿರುವ ಅವರು ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದು ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಕೋರಿದ್ದಾರೆ.
ನನ್ನನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದಾಗಿ ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಗಮನಹರಿಸಬಹುದು. ಜನ ಸೇವೆ ಮಾಡಲು ಈವರೆಗೂ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.