ಕರ್ನಾಟಕ

karnataka

ETV Bharat / bharat

ಆಂಧ್ರದಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ, ಶಾಲೆಗಳಿಗೆ ರಜೆ, 3 ಜಿಲ್ಲೆಗಳಿಗೆ ರೆಡ್ ಅಲರ್ಟ್​ - Heavy Rain In Andhra

ಆಂಧ್ರ ಪ್ರದೇಶದಲ್ಲಿ ಸತತ 2ನೇ ದಿನವೂ ಭಾರಿ ಮಳೆ ಮುಂದುವರೆದಿದೆ.

ಆಂಧ್ರ ಪ್ರದೇಶದಲ್ಲಿ ಸತತ ಮಳೆಯಿಂದ ತುಂಬಿರುವ ಜಲಾಶಯ
ಆಂಧ್ರ ಪ್ರದೇಶದಲ್ಲಿ ಸತತ ಮಳೆಯಿಂದ ತುಂಬಿರುವ ಜಲಾಶಯ (IANS)

By ETV Bharat Karnataka Team

Published : Sep 9, 2024, 12:36 PM IST

ವಿಶಾಖಪಟ್ಟಣಂ:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಆಂಧ್ರ ಪ್ರದೇಶದ ಉತ್ತರ ಕರಾವಳಿ ಮತ್ತು ಗೋದಾವರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ರಸ್ತೆ ಸಾರಿಗೆಗೆ ಅಡ್ಡಿಯಾಗಿದೆ. ಅವಿಭಜಿತ ಜಿಲ್ಲೆಗಳಾದ ವಿಶಾಖಪಟ್ಟಣಂ, ವಿಜಯನಗರಂ, ಶ್ರೀಕಾಕುಳಂ, ಪೂರ್ವ ಗೋದಾವರಿ ಮತ್ತು ಪಶ್ಚಿಮ ಗೋದಾವರಿಯಲ್ಲಿ ಸೋಮವಾರ ಸತತ ಎರಡನೇ ದಿನವೂ ಭಾರಿ ಮಳೆ ಮುಂದುವರೆದಿದ್ದು, ರಸ್ತೆಗಳು ಮತ್ತು ಕೃಷಿ ಜಮೀನುಗಳು ಮುಳುಗಿವೆ.

ತೊರೆಗಳು, ಸರೋವರಗಳು ಮತ್ತು ನೀರಾವರಿ ಕೆರೆಗಳು ಉಕ್ಕಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ಇದರಿಂದ ಹಲವಾರು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.

ಶಾಲೆಗಳಿಗೆ ರಜೆ: ಆಂಧ್ರ ಪ್ರದೇಶದಾದ್ಯಂತ ಇನ್ನೂ ಹೆಚ್ಚಿನ ಮಳೆಯಾಗಲಿದೆ ಎಂದು ಬಂದರು ಹವಾಮಾನ (ಎಂಇಟಿ) ಕಚೇರಿ ಮುನ್ಸೂಚನೆ ನೀಡಿದ್ದು, ಒಂದೆರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಶ್ರೀಕಾಕುಳಂ, ಪಾರ್ವತಿಪುರಂ ಮಾನ್ಯಂ, ಅಲ್ಲೂರಿ ಸೀತಾರಾಮರಾಜು, ವಿಶಾಖಪಟ್ಟಣಂ, ಅನಕಪಲ್ಲಿ ಮತ್ತು ಕಾಕಿನಾಡ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ರಾಜ್ಯ ಸರ್ಕಾರವು ವಿಶಾಖಪಟ್ಟಣಂನಲ್ಲಿ ಚಂಡಮಾರುತ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಪೊಲೀಸ್ ಮತ್ತು ತಹಶೀಲ್ದಾರ್ ಕಚೇರಿಗಳಲ್ಲಿ ಸಹ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ.

ಭಾರೀ ಮಳೆಯಿಂದಾಗಿ ಭೂಕುಸಿತದ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ಘಾಟ್ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಶ್ರೀಕಾಕುಳಂನಲ್ಲಿ ಮಿನಿವ್ಯಾನ್ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಸ್ಥಳೀಯರು ಚಾಲಕನನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಲಾಶಯಗಳಿಂದ ನೀರು ಹೊರಕ್ಕೆ: ಅನಕಪಲ್ಲಿ ಜಿಲ್ಲೆಯ ತಾಂಡವ ಮತ್ತು ಕಲ್ಯಾಣಪುಲೋವಾ ಜಲಾಶಯಗಳು ಅಪಾಯದ ಮಟ್ಟವನ್ನು ತಲುಪಿವೆ. ತಾಂಡವ ಜಲಾಶಯದ ಎರಡು ಗೇಟ್‌ಗಳನ್ನು ತೆರೆದು 600 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದೆ. ಜಲಾಶಯದ ಗರಿಷ್ಠ ಮಟ್ಟ 380 ಅಡಿ ಇದ್ದು, ಇಂದಿನ ನೀರಿನ ಮಟ್ಟ 379 ಅಡಿ ಇದೆ. ಜಲಾಶಯದ ನೀರು ಪಕ್ಕದ ರಸ್ತೆಯ ಮೇಲೆ ಹರಿಯುತ್ತಿದ್ದು, ಸುತ್ತಮುತ್ತಲಿನ ಜನ ಎಚ್ಚರಿಕೆಯಿಂದ ಇರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನದಿಗಳು ಮತ್ತು ಕೆರೆಗಳು ಉಕ್ಕಿ ಹರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ನರಸೀಪಟ್ಟಣಂ ಮತ್ತು ತುನಿ ನಡುವಿನ ರಸ್ತೆಯ ಮೇಲೆ ಸಂಚಾರ ಬಂದ್ ಮಾಡಲಾಗಿದೆ.

ರೆಡ್ ಅಲರ್ಟ್ ಘೋಷಣೆ: ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಶ್ರೀಕಾಕುಳಂ, ಪಾರ್ವತಿಪುರಂ ಮಾನ್ಯಂ ಮತ್ತು ವಿಜಯನಗರಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ವಿಶಾಖಪಟ್ಟಣಂ, ಅಲ್ಲೂರಿ ಸೀತಾರಾಮರಾಜು ಮತ್ತು ಅನಕಪಲ್ಲಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ಏತನ್ಮಧ್ಯೆ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸೋಮವಾರ ಎಲೂರು ಜಿಲ್ಲೆಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಇದನ್ನೂ ಓದಿ:4 ದಶಕಗಳ ನಂತರ ಚುನಾವಣಾ ಅಖಾಡಕ್ಕೆ ಮರಳಿದ ಜಮಾತೆ ಇಸ್ಲಾಮಿ: ಕುಲ್ಗಾಮ್​ನಲ್ಲಿ ಬೃಹತ್ ರ್‍ಯಾಲಿ - Jammu And Kashmir Election

ABOUT THE AUTHOR

...view details