ಕರ್ನಾಟಕ

karnataka

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗಿಯಾದ ಹಿಮಾಚಲ ಪ್ರದೇಶದ ಸಚಿವ

By ETV Bharat Karnataka Team

Published : Jan 22, 2024, 9:40 PM IST

ಹಿಮಾಚಲ ಪ್ರದೇಶದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು ಟ್ರಸ್ಟ್​ನ ಆಹ್ವಾನ ಸ್ಪೀಕರಿಸಿದ್ದಲ್ಲದೇ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ.

ವಿಕ್ರಮಾದಿತ್ಯ ಸಿಂಗ್ ಅವರು ಟ್ರಸ್ಟ್​ನ ಆಹ್ವಾನ
ವಿಕ್ರಮಾದಿತ್ಯ ಸಿಂಗ್ ಅವರು ಟ್ರಸ್ಟ್​ನ ಆಹ್ವಾನ

ಅಯೋಧ್ಯೆ/ಶಿಮ್ಲಾ:ಇಂದು ಮಧ್ಯಾಹ್ನ 12.29ರ ಶುಭ ಮುಹೂರ್ತದಲ್ಲಿ ರಾಮ ಮಂದಿರದಲ್ಲಿ ರಾಮಲಾಲಾ ಪ್ರತಿಷ್ಠಾಪನೆ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿ ನೆರವೇರಿಸಿದರು. ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ವಿಧಿವಿಧಾನಗಳೊಂದಿಗೆ ರಾಮಲಲ್ಲನಿಗೆ ವಿಶೇಷ ಪೂಜೆಗಳನ್ನು ಸಲ್ಲಿಸುವ ಮೂಲಕ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿದರು.

ಈ ವೇಳೆ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶದ ರಾಜ್ಯಪಾಲ ಆನಂದಿ ಬೆನ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪ್ರಧಾನಿ ಮೋದಿಯವರೊಂದಿಗೆ ಉಪಸ್ಥಿತರಿದ್ದರು. ಈ ಸಮಾರಂಭಕ್ಕೆ ಕ್ರೀಡಾ ವಿಭಾಗ, ಉದ್ಯಮ ಮತ್ತು ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು. ದೇವಸ್ಥಾನದ ಟ್ರಸ್ಟ್ ವತಿಯಿಂದ ಸುಮಾರು 7000 ಅತಿಥಿಗಳನ್ನು ಆಹ್ವಾನ ನೀಡಲಾಗಿತ್ತು. ಆದರೆ ಕಾಂಗ್ರೆಸ್​​​​​​ ಹಾಗೂ ಪ್ರತಿಪಕ್ಷಗಳ ಬಹುತೇಕ ನಾಯಕರು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಿಂದ ದೂರ ಉಳಿದರು.

ಆದರೆ ವಿಶೇಷ ಎಂಬಂತೆ ಹಿಮಾಚಲ ಪ್ರದೇಶದ ಕಾಂಗ್ರೆಸ್​ ಸರ್ಕಾರ ಮಾತ್ರ ಇಂದು ಸರ್ಕಾರಿ ರಜೆ ಘೊಷಣೆ ಮಾಡಿತ್ತಲ್ಲದೇ, ತನ್ನ ಪರವಾಗಿ ಸಚಿವ ವಿಕ್ರಮಾದಿತ್ಯ ಸಿಂಗ್​ ಅವರನ್ನು ಅಯೋಧ್ಯೆಗೆ ಕಳುಹಿಸುವ ಮೂಲಕ ಗಮನ ಸೆಳೆಯಿತು. ಸಮಾರಂಭಕ್ಕೆ ಆಗಮಿಸಿದ ಏಕೈಕ ಕಾಂಗ್ರೆಸ್ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ವಾಸ್ತವವಾಗಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸೋನಿಯಾ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ದೇವಾಲಯದ ಟ್ರಸ್ಟ್‌ನಿಂದ ಆಹ್ವಾನಿಸಲಾಗಿತ್ತು. ಆದರೆ ಅವರು ಆಹ್ವಾನವನ್ನು ಬಿಜೆಪಿ ಕಾರ್ಯಕ್ರಮ ಎಂದು ಕರೆದು ತಿರಸ್ಕರಿಸಿದ್ದರು.

ಇದೆಲ್ಲದರ ನಡುವೆ ಹಿಮಾಚಲದ ಕಾಂಗ್ರೆಸ್ ಸರ್ಕಾರದ ಸಚಿವ ವಿಕ್ರಮಾದಿತ್ಯ ಸಿಂಗ್ ಅವರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ವಿಕ್ರಮಾದಿತ್ಯ ಸಿಂಗ್ ಅವರು ಟ್ರಸ್ಟ್​ನ ಆಹ್ವಾನ ಸ್ಪೀಕರಿಸಿದ್ದಲ್ಲದೇ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದರು.

ಯಾರು ಈ ವಿಕ್ರಮಾದಿತ್ಯ ಸಿಂಗ್: ವಿಕ್ರಮಾದಿತ್ಯ ಸಿಂಗ್ ಪ್ರಸ್ತುತ ಹಿಮಾಚಲದ ಸುಖವಿಂದರ್ ಸುಖು ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದಾರೆ. ಇವರ ತಂದೆ ವೀರಭದ್ರ ಸಿಂಗ್ ಆರು ಬಾರಿ ಹಿಮಾಚಲದ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರದಲ್ಲಿ ಸಚಿವರಾಗಿದ್ದರು. ವಿಕ್ರಮಾದಿತ್ಯ ಸಿಂಗ್ ಅವರ ತಾಯಿ ಪ್ರತಿಭಾ ಸಿಂಗ್ ಪ್ರಸ್ತುತ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದಾರೆ. ಅಷ್ಟೇ ಅಲ್ಲ ಹಿಮಾಚಲ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಅವರು 2017 ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು. 2022 ರಲ್ಲಿ ಎರಡನೇ ಬಾರಿಗೆ ಗೆಲ್ಲುವ ಮೂಲಕ ವಿಧಾನಸಭೆಯನ್ನು ಪ್ರವೇಶಿಸಿದ್ದರು.

ಎರಡನೇ ಬಾರಿ ಶಾಸಕರಾಗಿ ಆಯ್ಕೆ ಅದ ಇವರು ಸುಖು ಸಂಪುಟದಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದಿವಂಗತ ವೀರಭದ್ರ ಸಿಂಗ್ ಅವರು ರಾಮಮಂದಿರ ನಿರ್ಮಾಣದ ಪರವಾಗಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ಅಂಶ. ವಿಕ್ರಮಾದಿತ್ಯ ಸಿಂಗ್ ಕೂಡ ಕೆಲವು ದಿನಗಳ ಹಿಂದೆ ತಮ್ಮ ತಂದೆ ತಮ್ಮ ಜೀವನದ ಕೊನೆಯ ಕ್ಷಣಗಳಲ್ಲಿ ರಾಮ ಮಂದಿರಕ್ಕಾಗಿ ತಮ್ಮ ವೈಯಕ್ತಿಕ ನಿಧಿಯಿಂದ ದೇಣಿಗೆ ನೀಡಿದ್ದರು ಎಂದು ಬಹಿರಂಗಪಡಿಸಿದ್ದರು. 8 ಜುಲೈ 2021 ರಂದು ವೀರಭದ್ರ ಸಿಂಗ್ ಅವರ ಮರಣದ ನಂತರ, ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್‌ನಂತಹ ಸಂಘಟನೆಗಳು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದವು. ಅವರನ್ನು ಹಿಂದೂ ಧರ್ಮದ ಹಿತೈಷಿ ಎಂದು ಬಣ್ಣಿಸಿದ್ದವು ಕೂಡಾ.

ಜನವರಿಯ ಆರಂಭದಲ್ಲಿ, ವಿಕ್ರಮಾದಿತ್ಯ ಸಿಂಗ್ ಅವರು ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೆ ರಾಮಮಂದಿರ ಟ್ರಸ್ಟ್‌ನಿಂದ ಆಹ್ವಾನವನ್ನು ಸ್ವೀಕರಿಸಿದ್ದರು. ಇದಕ್ಕಾಗಿ ಆಹ್ವಾನ ನೀಡಿದ ಆರ್‌ಎಸ್‌ಎಸ್, ವಿಶ್ವ ಹಿಂದೂ ಪರಿಷತ್ ಮತ್ತು ರಾಮಮಂದಿರ ಟ್ರಸ್ಟ್‌ಗೆ ಕೃತಜ್ಞತೆ ಸಲ್ಲಿಸಿದ್ದರು, ಈ ಕ್ಷಣಕ್ಕೆ ಸಾಕ್ಷಿಯಾಗುವ ಅದೃಷ್ಟವಂತರಲ್ಲಿ ನಾನೂ ಒಬ್ಬ ಎಂದು ವಿಕ್ರಮಾದಿತ್ಯ ಸಿಂಗ್​ ಹೇಳಿದ್ದರು.

ಇದನ್ನು ಓದಿ:ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ; ರಾಮಲಲ್ಲಾ ಪ್ರತಿಷ್ಠಾಪನೆ ದಿನವೇ ಪ್ರಧಾನಿಯಿಂದ ಹೊಸ ಘೋಷಣೆ

ABOUT THE AUTHOR

...view details