ಮಾಧೇಪುರ:ಪತ್ನಿಯ ಅಕ್ರಮ ಸಂಬಂದಿಂದ ಬೇಸತ್ತ ಪತಿಯೊಬ್ಬ, ಆಕೆಯ ಕತ್ತನ್ನು ಸೀಳಿ ರುಂಡವನ್ನು ಪೊಲೀಸ್ ಠಾಣೆಗೆ ತಂದ ಘಟನೆ ಬಿಹಾರದಲ್ಲಿ ನಡೆದಿದೆ. ದಾರಿ ಮಧ್ಯೆ ಇದನ್ನು ಕಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆತನನ್ನು ಬಂಧಿಸಲಾಗಿದೆ. ಕೊಲೆಗಡುಕ ಪತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈ ಬಗ್ಗೆ ಶ್ರೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರುಂಡ ಕೈಯಲ್ಲಿ ಹಿಡಿದು ಬಂದ ಪತಿ:ಕೌಟುಂಬಿಕ ಕಲಹದಿಂದ ಪತಿಯೇ ಪತ್ನಿಯ ತಲೆ ಕಡಿದು ಕೊಲೆ ಮಾಡಿದ್ದಾನೆ ಎಂದು ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶ್ರೀನಗರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ನಾರಾಯಣ್, ಪತ್ನಿಯನ್ನು ಕೊಂದ ಬಗ್ಗೆ ಪತಿ ತಪ್ಪೊಪ್ಪಿಕೊಂಡಿದ್ದಾನೆ. ಪತ್ನಿಯ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಪತಿ ಆರೋಪಿಸಿದ್ದಾನೆ. ಈ ಬಗ್ಗೆ ಪದೆ ಪದೇ ತಿಳಿ ಹೇಳಿದರೂ, ಸರಿದಾರಿಗೆ ಬಾರದ ಕಾರಣ, ಕೋಪದ ಭರದಲ್ಲಿ ಪತ್ನಿಯನ್ನು ಹರಿತವಾದ ಚಾಕುವಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾಗಿ ಆರೋಪಿ ತಿಳಿಸಿದ್ದಾನೆ ಎಂದರು.
ಪೊಲೀಸರಿಗೆ ತಿಳಿಸಿದ ದಾರಿಹೋಕರು:ಪತ್ನಿಯ ರುಂಡವನ್ನು ತುಂಡರಿಸಿದ ಬಳಿಕ ಪತಿಯು ಅದನ್ನು ಠಾಣೆಗೆ ತರುತ್ತಿದ್ದ. ಮಾರ್ಗ ಮಧ್ಯೆ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲ್ಲಿಗೆ ಬಂದ ಆರಕ್ಷಕರು ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಶವವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಮಾಧೇಪುರ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ.