ಗುವಾಹಟಿ(ಅಸ್ಸಾಂ):ಭಯೋತ್ಪಾದಕ ಸಂಘಟನೆ ಐಎಸ್‌ಐಎಸ್‌ಗೆ ಸೇರಲು ಇಚ್ಛೆ ವ್ಯಕ್ತಪಡಿಸಿ ಹೊರಟ ಐಐಟಿ-ಗುವಾಹಟಿಯ ವಿದ್ಯಾರ್ಥಿಯೊಬ್ಬನನ್ನು ಶನಿವಾರ ಸಂಜೆ ಹಜೋ ಎಂಲ್ಲಿ ವಶಕ್ಕೆ ಪಡೆದಿರುವುದಾಗಿ ಅಸ್ಸಾಂ ಪೊಲೀಸರು ತಿಳಿಸಿದ್ದಾರೆ. ತೌಸಿಫ್ ಅಲಿ ಫಾರೂಕ್ ಎಂಬಾತ ಪ್ರಯಾಣಿಸುತ್ತಿರುವ ಮಾಹಿತಿ ಪಡೆದ ಪೊಲೀಸರು, ತಡೆದು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಟಿಎಫ್) ಕಲ್ಯಾಣ್ ಕುಮಾರ್ ಪಾಠಕ್ ಈ ಕುರಿತು ವಿವರವಾದ ಮಾಹಿತಿ ನೀಡಿದ್ದು, ಈ ವಿದ್ಯಾರ್ಥಿ ಮೊದಲು ತಾನು ಐಸಿಸ್ ಸೇರುವ ಹಾದಿಯಲ್ಲಿರುವುದಾಗಿ ಲಿಂಕ್ಡ್‌ಇನ್ ಪುಟದಲ್ಲಿ ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ ನಾವು ಮೊದಲು ಉಲ್ಲೇಖಿಸಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಿ ತನಿಖೆ ಆರಂಭಿಸಿದೆವು. ತಕ್ಷಣವೇ ಐಐಟಿ-ಗುವಾಹಟಿ ಸಂಸ್ಥೆಯ ಅಧಿಕಾರಿಗಳನ್ನು ಸಂಪರ್ಕಿಸಿದೆವು. ಆಗ ವಿದ್ಯಾರ್ಥಿ ನಾಪತ್ತೆಯಾಗಿರುವುದು ಬೆಳಕಿಗೆ ಬಂತು. ಆತನ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿರುವುದು ತಿಳಿದು ಬಂತು ಎಂದರು.