ನವದೆಹಲಿ:ಇತ್ತೀಚಿಗೆ ನಡೆದಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟವು ಸುಪ್ರೀಂ ಕೋರ್ಟ್ ಮೊರೆ ಹೋಗಲು ಸಜ್ಜಾಗಿದೆ. ಎನ್ಸಿಪಿಯ ಶರದ್ ಪವಾರ್ ಬಣದ ನಾಯಕ ಪ್ರಶಾಂತ್ ಜಗ್ತಾಪ್ ಸುಪ್ರೀಂ ಕೋರ್ಟ್ ಕದ ತಟ್ಟಲು ನಿರ್ಧರಿಸಿದ್ದಾರೆ. ಪುಣೆಯ ಜಿಲ್ಲೆಯ ಹದಾಪ್ಸರ್ ಕ್ಷೇತ್ರದಿಂದ (Hadapsar) ಅವರು ಚುನಾವಣಾ ಕಣಕ್ಕೆ ಇಳಿದಿದ್ದರು.
ಎನ್ಸಿಪಿ-ಎಸ್ಪಿ ಮುಖ್ಯಸ್ಥ ಶರದ್ ಪವಾರ್, ಎಎಪಿ ಸಂಚಾಲಕ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಖ್ಯಾತ ವಕೀಲ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ. ಪವಾರ್ ಅವರು ವಿಧಾನಸಭೆಯಲ್ಲಿ ಸೋತ ತಮ್ಮ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಾರೆ.
ಬಿಜೆಪಿ ನೇತೃತ್ವ ಮಹಾಯುತಿ ಮೈತ್ರಿಯು ಇವಿಎಂ ದುರ್ಬಳಕೆ ಮಾಡಿಕೊಂಡಿದೆ. ಇದರಿಂದಲೇ ಚುನಾವಣೆಯಲ್ಲಿ ಸೋಲು ಉಂಟಾಗಿದೆ ಎಂದು ಇಂಡಿಯಾ ಬ್ಲಾಕ್ ಒಕ್ಕೂಟ ಆರೋಪಿಸಿದೆ.