ನವದೆಹಲಿ: ಭಾರತದ ಜಿಡಿಪಿ ಬೆಳವಣಿಗೆ ಈ ವರ್ಷ ಶೇ.7ರಷ್ಟು ಬೆಳೆಯಬಹುದು ಎನ್ನುವ ಅಂದಾಜು ಇದೆ. ಈ ಮೂಲಕ ಜಿ20 ರಾಷ್ಟ್ರಗಳ ಆರ್ಥಿಕತೆಯಲ್ಲಿ ಭಾರತ ಅಗ್ರಪಂಕ್ತಿ ಅಲಂಕರಿಸಿದೆ. ಶೇ.5ರಷ್ಟು ಬೆಳವಣಿಯೊಂದಿಗೆ ಇಂಡೋನೇಷ್ಯಾ ಎರಡನೇ ಸ್ಥಾನ ಮತ್ತು ಶೇ.4.8ರಷ್ಟು ಬೆಳವಣಿಯೊಂದಿಗೆ ಚೀನಾ ಮೂರನೇ ಸ್ಥಾನದಲ್ಲಿವೆ.
2024ರಲ್ಲಿ ಶೇ.7 ರಷ್ಟು ಜಿಡಿಪಿ ಬೆಳವಣಿಗೆಯ ದರದೊಂದಿಗೆ ಭಾರತವು ಜಿ20ಯಲ್ಲಿ ಮುನ್ನಡೆ ಸಾಧಿಸಿದೆ. ಇದು ಭಾರತದ ದೃಢವಾದ ಆರ್ಥಿಕತೆ ಮತ್ತು ಜಾಗತಿಕ ಸವಾಲುಗಳ ನಡುವೆಯೂ ದೇಶದ ಆರ್ಥಿಕತೆ ವೇಗವಾಗಿ ಬೆಳವಣಿಗೆ ಹೊಂದುತ್ತಿರುವುದನ್ನು ಸ್ಪಷ್ಟಪಡಿಸುತ್ತಿದೆ ಎಂದು ಬ್ರೆಜಿಲ್‌ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ರಾಷ್ಟ್ರಗಳ ಅಂದಾಜು ಜಿಡಿಪಿ ದರ ಪಟ್ಟಿ ಬಿಡುಗಡೆ ಮಾಡಿದ ನಂತರ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಶೇ. 3.6 ರಷ್ಟು ಜಿಡಿಪಿ ಬೆಳವಣಿಗೆಯ ದರದೊಂದಿಗೆ ರಷ್ಯಾ ನಾಲ್ಕನೇ, ಶೃಂಗಸಭೆಯ ಆತಿಥೇಯ ರಾಷ್ಟ್ರ ಬ್ರೆಜಿಲ್ ಶೇ. 3ರಷ್ಟು ಜಿಡಿಪಿ ಬೆಳವಣಿಗೆಯ ದರದೊಂದಿಗೆ 5ನೇ ಸ್ಥಾನದಲ್ಲಿದೆ. ಆಫ್ರಿಕಾ ಶೇ.3ರಷ್ಟು ಜಿಡಿಪಿ ಬೆಳವಣಿಗೆಯ ದರದೊಂದಿಗೆ 6ನೇ ಸ್ಥಾನ ಮತ್ತು ಅಮೆರಿಕ ಶೇ.2.8ರಷ್ಟು ಜಿಡಿಪಿ ಬೆಳವಣಿಗೆಯ ದರದೊಂದಿಗೆ 7ನೇ ಸ್ಥಾನದಲ್ಲಿದೆ.