ಕರ್ನಾಟಕ

karnataka

ETV Bharat / bharat

ಭಾರತ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ - REPUBLIC DAY CHIEF GUEST

ಇಂಡೋನೇಷ್ಯಾದ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಈ ಬಾರಿಯ ಗಣರಾಜ್ಯೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಪ್ರಬೊವೊ ಸುಬಿಯಾಂಟೊ
ಪ್ರಬೊವೊ ಸುಬಿಯಾಂಟೊ (PTI)

By ETV Bharat Karnataka Team

Published : Jan 12, 2025, 12:47 PM IST

ನವದೆಹಲಿ: ಇಂಡೋನೇಷ್ಯಾದ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಭಾರತ ಭೇಟಿಯ ನಂತರ ಸುಬಿಯಾಂಟೊ ನೇರವಾಗಿ ಪಾಕಿಸ್ತಾನಕ್ಕೆ ತೆರಳಬೇಕಿತ್ತು. ಆದರೆ ಭಾರತದ ಆಕ್ಷೇಪದ ನಂತರ ಅವರು ತಕ್ಷಣಕ್ಕೆ ಪಾಕಿಸ್ತಾನಕ್ಕೆ ಹೋಗುತ್ತಿಲ್ಲ ಎನ್ನಲಾಗಿದೆ.

ನವದೆಹಲಿ ಭೇಟಿಯ ನಂತರ ಇಂಡೋನೇಷ್ಯಾ ಅಧ್ಯಕ್ಷರು ಪಾಕಿಸ್ತಾನಕ್ಕೆ ಆಗಮಿಸಲಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ಈಗಾಗಲೇ ವರದಿ ಮಾಡಿವೆ.

ಗಣರಾಜ್ಯೋತ್ಸವದ ಮುಖ್ಯ ಅತಿಥಿ ಯಾರಾಗಲಿದ್ದಾರೆ ಎಂಬ ಬಗ್ಗೆ ಭಾರತ ಇನ್ನಷ್ಟೇ ಅಧಿಕೃತವಾಗಿ ಘೋಷಿಸಬೇಕಿದೆ. ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸುಬಿಯಾಂಟೊ ಅವರೊಂದಿಗೆ ಹಲವಾರು ವಿಷಯಗಳ ಬಗ್ಗೆ ನಡೆಸಲಿದ್ದಾರೆ.

73 ವರ್ಷದ ಮಾಜಿ ಸೇನಾ ಜನರಲ್ ಸುಬಿಯಾಂಟೊ 2024ರ ಅಕ್ಟೋಬರ್​ನಲ್ಲಿ ಇಂಡೋನೇಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಕಳೆದ ವರ್ಷ ಜೂನ್​ನಲ್ಲಿ ಸುಬಿಯಾಂಟೊ ಅವರು ಪ್ರಧಾನಿ ಮೋದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಉಭಯ ನಾಯಕರು ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದ್ದರು.

"ನಿಯೋಜಿತ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಅವರು ದೂರವಾಣಿ ಕರೆ ಮಾಡಿರುವುದು ಸಂತೋಷ ತಂದಿದೆ. ಮುಂದಿನ ಅಧ್ಯಕ್ಷರಾಗಲಿರುವ ಅವರಿಗೆ ಶುಭ ಹಾರೈಸುತ್ತೇನೆ" ಎಂದು ಪ್ರಧಾನಿ ಮೋದಿ ಆವಾಗ ಟ್ವೀಟ್ ಮಾಡಿದ್ದರು.

ಈ ಹಿಂದಿನ ವರ್ಷಗಳ ಗಣರಾಜ್ಯೋತ್ಸವ ಅತಿಥಿಗಳು: ಪ್ರತೀ ವರ್ಷ ಗಣರಾಜ್ಯೋತ್ಸವ ಆಚರಣೆಯಲ್ಲಿ ಭಾಗವಹಿಸಲು ಭಾರತವು ವಿಶ್ವ ನಾಯಕರನ್ನು ಆಹ್ವಾನಿಸುತ್ತದೆ.

  • ಕಳೆದ ವರ್ಷ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಮುಖ್ಯ ಅತಿಥಿಯಾಗಿದ್ದರು.
  • ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತಾಹ್ ಎಲ್-ಸಿಸಿ 2023ರಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಉಪಸ್ಥಿತರಿದ್ದರು.
  • ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ 2021 ಮತ್ತು 2022ರಲ್ಲಿ ಗಣರಾಜ್ಯೋತ್ಸವಕ್ಕೆ ಯಾವುದೇ ಮುಖ್ಯ ಅತಿಥಿಗಳನ್ನು ಆಹ್ವಾನಿಸಿರಲಿಲ್ಲ.
  • 2020ರಲ್ಲಿ, ಅಂದಿನ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಿದ್ದರು.
  • 2019ರಲ್ಲಿ, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಗಣರಾಜ್ಯೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.
  • 2018ರಲ್ಲಿ, ಎಲ್ಲಾ 10 ಆಸಿಯಾನ್ ದೇಶಗಳ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
  • 2017ರಲ್ಲಿ ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅತಿಥಿಯಾಗಿದ್ದರು.
  • 2016ರಲ್ಲಿ ಫ್ರಾನ್ಸ್ ಅಧ್ಯಕ್ಷ ಫ್ರಾಂಕೋಯಿಸ್ ಹೊಲಾಂಡ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
  • 2015ರಲ್ಲಿ ಅಂದಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಈ ಮೆರವಣಿಗೆಯನ್ನು ವೀಕ್ಷಿಸಿದ್ದರು.
  • 2014ರಲ್ಲಿ ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಮುಖ್ಯ ಅತಿಥಿಯಾಗಿದ್ದರು.
  • 2013ರಲ್ಲಿ ಭೂತಾನ್ ರಾಜ ಜಿಗ್ಮೆ ಖೇಸರ್ ನಮ್ಗಯೆಲ್ ವಾಂಗ್ಚುಕ್ ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಪೊಲೀಸರು - ಲಾರೆನ್ಸ್ ಬಿಷ್ಣೋಯ್ ಸಹಚರರ ನಡುವೆ ಗುಂಡಿನ ಚಕಮಕಿ: ಮೂವರ ಬಂಧನ - LAWRENCE BISHNOI ASSOCIATES ARREST

ABOUT THE AUTHOR

...view details