ಶ್ರೀನಗರ:ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಕಿಶ್ತ್ವಾರ್ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಈ ಬೆನ್ನಲ್ಲೇ ಬಾರಾಮುಲ್ಲಾ ಜಿಲ್ಲೆಯ ಕೀರಿ ಪ್ರದೇಶದಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ತಡರಾತ್ರಿ ಸೇನೆಯ ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾರಚಣೆಗೆ ಇಳಿದಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ಓರ್ವ ಉಗ್ರ ಹತನಾಗಿದ್ದ. ಬಳಿಕ ಕಾರ್ಯಾಚರಣೆ ಮುಂದುವರಿಸಿದಾಗ ಮತ್ತಿಬ್ಬರು ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ. ಶಾಲೆಯ ಕಟ್ಟಡದೊಳಗಿನಿಂದಲೇ ಉಗ್ರರು ಭದ್ರತಾ ಪಡೆಯತ್ತ ಗುಂಡಿನ ದಾಳಿ ಮಾಡುತ್ತಿದ್ದೆ. ಭದ್ರತಾ ಪಡೆಯ ಕಾರ್ಯಾಚರಣೆ ತೀವ್ರಗೊಂಡಿದೆ. ಸ್ಥಳದಲ್ಲಿ ಭಾರೀ ಭದ್ರತೆ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.