ಧನಬಾದ್:ಜಾರ್ಖಂಡ್ನ ಧನಬಾದ್ನಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರೊಬ್ಬರು 10ನೇ ತರಗತಿ ವಿದ್ಯಾರ್ಥಿನಿಯರ ಅಂಗಿ ಬಿಚ್ಚುವಂತೆ ಆದೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆಘಾತಕಾರಿ ಘಟನೆ ಜನವರಿ 9ರ ಗುರುವಾರದಂದು ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶಾಲೆಯಲ್ಲಿ ನಡೆದ ಈ ವಿಷಯದ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೆಲ ವಿದ್ಯಾರ್ಥಿನಿಯರ ಪೋಷಕರು ಶನಿವಾರ ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಶಿಕ್ಷಣ ಅಧಿಕಾರಿ (ಡಿಇಒ), ಜಿಲ್ಲಾ ಕಲ್ಯಾಣ ಅಧಿಕಾರಿ ಮತ್ತು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಯವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಧನಬಾದ್ ಜಿಲ್ಲಾಧಿಕಾರಿ ಮಾಧವಿ ಮಿಶ್ರಾ ತಿಳಿಸಿದ್ದಾರೆ. ಈ ವಿಷಯದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.
"ಜಿಲ್ಲಾಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಶಿಕ್ಷಣಾಧಿಕಾರಿ, ಜಿಲ್ಲಾ ಕಲ್ಯಾಣಾಧಿಕಾರಿ ಮತ್ತು ಎಸ್‌ಡಿಪಿಒ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ನಾವು ಶಾಲಾ ಆಡಳಿತ ಮಂಡಳಿಯೊಂದಿಗೆ ಮಾತನಾಡಿ ಘಟನೆಯ ಬಗ್ಗೆ ಮಾಹಿತಿ ಪಡೆಯಲಿದ್ದೇವೆ ಮತ್ತು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಶಾಲೆಯಲ್ಲಿ ಇಂಥ ಘಟನೆ ನಡೆಯುವುದನ್ನು ಸಹಿಸಲು ಸಾಧ್ಯವಿಲ್ಲ" ಎಂದು ಜಿಲ್ಲಾಧಿಕಾರಿ ಹೇಳಿದರು. ಘಟನೆಯ ಬಗೆಗಿನ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಬರಬೇಕಿವೆ.
ಇದನ್ನೂ ಓದಿ: ಮಹಾಕುಂಭ ಮೇಳ: ಕಾಶಿ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿದ ಸ್ಟೀವ್ ಜಾಬ್ಸ್ ಪತ್ನಿ - MAHAKUMBH MELA