ಕರ್ನಾಟಕ

karnataka

ETV Bharat / bharat

ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರಳಿ ನೀಡಲು ಕೇಂದ್ರ ಸರ್ಕಾರ ವಿಳಂಬ: ಕಾಂಗ್ರೆಸ್​ ಆಕ್ಷೇಪ - JK statehood restoration demand - JK STATEHOOD RESTORATION DEMAND

ಜಮ್ಮು- ಕಾಶ್ಮೀರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದರೂ, ರಾಜ್ಯ ಸ್ಥಾನಮಾನ ನೀಡಲು ಹಿಂದೇಟು ಹಾಕುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ಕಿಡಿಕಾರಿದೆ.

ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ
ಜಮ್ಮು ಕಾಶ್ಮೀರ (ETV Bharat)

By PTI

Published : Aug 17, 2024, 11:14 AM IST

ನವದೆಹಲಿ:ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಆಯೋಗ ಚುನಾವಣೆ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಆದರೆ, ಕೇಂದ್ರ ಸರ್ಕಾರ ರಾಜ್ಯ ಸ್ಥಾನಮಾನ ನೀಡದೆ ಇರುವುದು ದುರದೃಷ್ಟಕರ ಎಂದು ಕಾಂಗ್ರೆಸ್​ ಆಕ್ಷೇಪ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ಇತ್ತೀಚೆಗೆ ಲೆಫ್ಟಿನೆಂಟ್ ಗವರ್ನರ್‌ ಅಧಿಕಾರವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮೂಲಕ ಚುನಾಯಿತ ರಾಜ್ಯ ಸರ್ಕಾರದ ಅಧಿಕಾರವನ್ನು ಅಪಹಾಸ್ಯ ಮಾಡಿದಂತಾಗಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮ ಹಕ್ಕು ಚಲಾಯಿಸಲು ಕಾಯುತ್ತಿದ್ದಾರೆ. ಇಂಡಿಯಾ ಕೂಟದ ಮಿತ್ರಪಕ್ಷಗಳ ಕಡೆಗೆ ನ್ಯಾಯಕ್ಕಾಗಿ ನೋಡುತ್ತಿದ್ದಾರೆ. ಹರಿಯಾಣದ ಜನರ ಕಾಯುವಿಕೆಯೂ ಕೊನೆಗೊಳ್ಳಲಿದೆ. ಕಾರಣ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಪತನವಾಗುವುದು ಖಚಿತ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಹೇಳಿದ್ದಾರೆ.

ಗವರ್ನರ್​ ಆಡಳಿತಕ್ಕೆ ವಿರಾಮ:ಈ ಬಗ್ಗೆ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆ ಘೋಷಿಸಿದ್ದನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗಡುವು ವಿಧಿಸಿದೆ. ಅಲ್ಲಿನ ಜನರಿಗೆ ಸಾಂವಿಧಾನಿಕ ಹಕ್ಕುಗಳನ್ನು ನೀಡಲು ಮತ್ತು ಗವರ್ನರ್​ ಆಡಳಿತಕ್ಕೆ ಪೂರ್ಣ ವಿರಾಮ ಹಾಕಲು ಶೀಘ್ರ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

"ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರವನ್ನು ನಿಯಂತ್ರಿಸಲು ಬಯಸಿದೆ. ಆದ್ದರಿಂದ ಜುಲೈನಲ್ಲಿ ಜಮ್ಮು ಕಾಶ್ಮೀರ ಮರುಸಂಘಟನೆ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ತಂದು ಲೆಫ್ಟಿನೆಂಟ್​ ಗವರ್ನರ್​ಗೆ ಹೆಚ್ಚಿನ ಅಧಿಕಾರವನ್ನು ನೀಡಿದೆ. ಕಳೆದೊಂದು ದಶಕದಲ್ಲಿ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಯೋಗಗಳನ್ನು ಮಾಡಿದೆ. ಆದರೆ, ಅಲ್ಲಿನ ಜನರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ತಂತ್ರಗಳನ್ನು ತಿರಸ್ಕರಿಸಿದ್ದಾರೆ" ಎಂದು ಅವರು ಹೇಳಿದ್ದಾರೆ.

ಜಮ್ಮುವಿನಲ್ಲಿ ಸರಣಿ ಉಗ್ರ ದಾಳಿ:ಜಮ್ಮುವಿನಲ್ಲಿ ಜೂನ್​ 9ರಿಂದ ಇಲ್ಲಿಯವರೆಗೂ 27 ಉಗ್ರ ದಾಳಿಗಳು ನಡೆದಿವೆ. ಅದರಲ್ಲಿ 18 ಯೋಧರು ಹುತಾತ್ಮರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹಲವು ವರ್ಷಗಳಿಂದ ಕಾಶ್ಮೀರಿ ಪಂಡಿತರು ಮತ್ತು ವಲಸಿಗರು ದಾಳಿಗಳಿಗೆ ತುತ್ತಾಗಿದ್ದಾರೆ ಎಂದಿದ್ದಾರೆ.

ಈ ಹಿಂದೆ ರಾಜ್ಯವಾಗಿದ್ದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ಲಡಾಖ್​ ನಾಲ್ಕು ಶಾಸಕರನ್ನು ಹೊಂದಿತ್ತು. ಆದರೆ, ಈಗ ಜನರಿಂದ ನೇರವಾಗಿ ಚುನಾಯಿತರಾದ ಶಾಸಕರು ಇಲ್ಲ. ಹೀಗಾಗಿ, ಅಲ್ಲಿನ ಜನರು ಬದಲಾವಣೆಗಾಗಿ ಹಂಬಲಿಸುತ್ತಿದ್ದಾರೆ. ನ್ಯಾಯ ಸಿಗುವ ನಿಟ್ಟಿನಲ್ಲಿ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳತ್ತ ಎದುರು ನೋಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಜನರ ಭಾವನೆಗಳಿಗೆ ಸ್ಪಂದಿಸಿ, ಗೆಲುವಿಗೆ ಶ್ರಮಿಸಬೇಕು" ಎಂದು ಖರ್ಗೆ ಕರೆ ನೀಡಿದ್ದಾರೆ.

ಚುನಾವಣಾ ದಿನಾಂಕ ಘೋಷಣೆ:90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ. ಮತ ಎಣಿಕೆ ಅಕ್ಟೋಬರ್​ 4ರಂದು ಜರುಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಶುಕ್ರವಾರ ಘೋಷಿಸಿದ್ದಾರೆ.

ಇದನ್ನೂ ಓದಿ:ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಅಕ್ಟೋಬರ್‌ 4ಕ್ಕೆ ಫಲಿತಾಂಶ - Assembly Elections 2024

ABOUT THE AUTHOR

...view details