ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ(ಎನ್‌ಐಎ) ಕಚೇರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಘಟನೆಯನ್ನು ಪೊಲೀಸರು ಖಚಿತಪಡಿಸಿದ್ದಾರೆ.
ಚೆನ್ನೈ ಎನ್‌ಐಎ ಕಚೇರಿಗೆ ಕರೆ ಮಾಡಿ ಪ್ರಧಾನಿ ಮೋದಿಗೆ ಜೀವ ಬೆದರಿಕೆ: ಸೈಬರ್ ಪೊಲೀಸರಿಂದ ತನಿಖೆ - Threat Call To Modi - THREAT CALL TO MODI
ಚೆನ್ನೈನಲ್ಲಿನ ಎನ್‌ಐಎ ಕಚೇರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಪ್ರಧಾನಿ ಮೋದಿ ಅವರಿಗೆ ಜೀವ ಬೆದರಿಕೆ ಹಾಕಿದ್ದಾನೆ.
Published : May 23, 2024, 11:10 AM IST
ಅಪರಿಚಿತ ವ್ಯಕ್ತಿ ಇಂದು ಬೆಳಿಗ್ಗೆ ಪುರಸೈವಾಕಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಐಎ ಕಚೇರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ಮೋದಿ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಸ್ಥೆಯ ಅಧಿಕಾರಿಗಳು ಚೆನ್ನೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ತನಿಖೆ ಕೈಗೊಂಡಿರುವ ಸೈಬರ್ ಅಪರಾಧ ವಿಭಾಗದ ಪೊಲೀಸರು, ಯಾವ ಪ್ರದೇಶದಿಂದ ಬೆದರಿಕೆ ಕರೆ ಬಂದಿದೆ?, ಯಾವ ಸಿಮ್ ಕಾರ್ಡ್ ಬಳಸಲಾಗಿದೆ? ಎಂಬೆಲ್ಲಾ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ರಾಮೇಶ್ವರಂ ಕೆಫೆ ಸ್ಫೋಟ ಖಂಡಿಸಿದ ಬಳಿಕ ಜೀವ ಬೆದರಿಕೆ: ಪ್ರಶಾಂತ್ ಸಂಬರಗಿ ದೂರು - Rameswaram Cafe Blast