ಹೈದರಾಬಾದ್:2024ರ ಲೋಕಸಭೆ ಚುನಾವಣೆಯ ನಾಲ್ಕನೇ ಹಂತಕ್ಕೆ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದೆ. 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ 96 ಲೋಕಸಭಾ ಕ್ಷೇತ್ರಗಳಲ್ಲಿ ಜನರು ಮತಗಟ್ಟೆಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡುತ್ತಿದ್ದಾರೆ.
ತೆಲಂಗಾಣದ 17 ಲೋಕಸಭಾ ಸ್ಥಾನಗಳು ಹಾಗೂ ಆಂಧ್ರಪ್ರದೇಶದಲ್ಲಿ ಲೋಕಸಭೆ ಜೊತೆಗೆ ವಿಧಾನಸಭೆ ಚುನಾವಣೆಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಸ್ಟಾರ್ ನಟರು ಕೂಡಾ ಬೆಳಗ್ಗೆಯೇ ಕುಟುಂಬಸಮೇತರಾಗಿ ಬಂದು ವೋಟ್ ಹಾಕಿದರು.
ನಟರಾದ ಚಿರಂಜೀವಿ, ಜೂನಿಯರ್ ಎನ್‌ಟಿಆರ್, ಅಲ್ಲು ಅರ್ಜುನ್ ತಮ್ಮ ತಮ್ಮ ಮತಕೇಂದ್ರಗಳಲ್ಲಿ ಹಕ್ಕು ಚಲಾಯಿಸಿದರು. ಇವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದು ವಿಶೇಷವಾಗಿತ್ತು. ಚಿರಂಜೀವಿ, ಜ್ಯೂನಿಯರ್ ಎನ್‌ಟಿಆರ್ ಪತ್ನಿಸಮೇತರಾಗಿ ಮತಗಟ್ಟೆಗೆ ಆಗಮಿಸಿದ್ದರು.
ಎಲ್ಲರೂ ವೋಟ್ ಮಾಡಿ-ಜೂನಿಯರ್ ಎನ್‌ಟಿಆರ್: "ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು. ಈ ಮೂಲಕ ಮುಂದಿನ ಪೀಳಿಗೆಗೆ ಸಂದೇಶ ರವಾನಿಸಬೇಕಿದೆ' ಎಂದು ಮತದಾನದ ಬಳಿಕ ಜೂನಿಯರ್ ಎನ್‌ಟಿಆರ್ ತಿಳಿಸಿದರು.