ಕರ್ನಾಟಕ

karnataka

ETV Bharat / bharat

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; 24 ಗಂಟೆಗಳಲ್ಲಿ ಸಾಧಾರಣ ಮಳೆ ಸಂಭವ - LOW PRESSURE IN BAY OF BENGAL

ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ಮುಂದುವರಿದ ಕಡಿಮೆ ಒತ್ತಡ - ಮುಂದಿನ 24 ಗಂಟೆಗಳಲ್ಲಿ ಸಾಧಾರಣದಿಂದ ಲಘು ಮಳೆ ಸಾಧ್ಯತೆ

LOW PRESSURE IN BAY OF BENGAL
ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ; 24 ಗಂಟೆಗಳಲ್ಲಿ ಸಾಧಾರಣ ಮಳೆ ಸಂಭವ (ETV Bharat)

By ETV Bharat Karnataka Team

Published : 23 hours ago

ವಿಜಯವಾಡ, ಆಂಧ್ರಪ್ರದೇಶ: ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ವಾತಾವರಣ ಮುಂದುವರಿದಿದೆ. ಉತ್ತರ ತಮಿಳುನಾಡು ಮತ್ತು ಆಂಧ್ರದ ದಕ್ಷಿಣ ಕರಾವಳಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡ ದುರ್ಬಲಗೊಂಡು ಮುಂದಿನ 24 ಗಂಟೆಗಳಲ್ಲಿ ಅದೇ ಸ್ಥಳದಲ್ಲಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಪರಿಣಾಮ ಕರಾವಳಿ ಆಂಧ್ರದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಇಂದು ಪ್ರಕಾಶಂ, ತಿರುಪತಿ ಮತ್ತು ನೆಲ್ಲೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗಂಟೆಗೆ 35 ರಿಂದ 45 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆಂಧ್ರ ಕರಾವಳಿ ತೀರದ ಬಂದರುಗಳಿಗೆ ಮೂರನೇ ನಂಬರ್ ಅಪಾಯದ ಎಚ್ಚರಿಕೆಯನ್ನು ನೀಡಲಾಗಿದೆ. ಮೀನುಗಾರರು ಬೇಟೆಗೆ ಹೋಗದಂತೆ ಸೂಚಿಸಲಾಗಿದೆ.

ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ: ಕಡಿಮೆ ಒತ್ತಡದ ಪರಿಣಾಮ ಬಾಪಟ್ಲಾ ಜಿಲ್ಲೆಯ ಕರಾವಳಿ ಭಾಗದಲ್ಲಿ ಬೆಳಗಿನಿಂದಲೇ ತುಂತುರು ಮಳೆಯಾಗುತ್ತಿದೆ. ಚಿರಾಳ, ಬಾಪಟ್ಲ, ಕರಚೇಡು, ಪರ್ಚೂರು, ಮರ್ತೂರು, ವೇಟಪಾಲೆಂ, ಬಾಪಟ್ಲ, ಪಿ.ವಿ.ಪಾಲೆಂ, ಚಿತಾಂಬ, ಸಂತೆಮಗುಳೂರು, ನಿಜಾಂಪಟ್ಣಂ, ರಾಯಪಳ್ಳ ಪ್ರದೇಶಗಳಲ್ಲಿ ಮಳೆಯಾಗಲಿದೆ.

ಹವಾಮಾನ ಇಲಾಖೆಯ ಭಾರೀ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ರೇಪಲ್ಲೆ ಕ್ಷೇತ್ರದ ನಿಜಾಂಪಟ್ಟಣ ಬಂದರಿನಲ್ಲಿ ಮೀನುಗಾರಿಕೆಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಈಗಾಗಲೇ ಮೀನುಗಾರಿಕೆಗೆ ತೆರಳಿದ್ದ ಬೋಟ್ ಗಳು ವಾಪಸ್ ಬಂದು ಲಂಗರು ಹಾಕಿವೆ.

ಇದನ್ನು ಓದಿ:ಈ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ ರವಾನೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಚಳಿ: ರೆಡ್ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ABOUT THE AUTHOR

...view details