ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಿರ್ಲಕ್ಷ್ಯದಿಂದ ಕಾಲ್ತುಳಿತ ಸಂಭವಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಇಂದು ಸುಪ್ರೀಂ ಕೋರ್ಟ್ ವಜಾ ಮಾಡಿತು.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿದೆ. ಅರ್ಜಿದಾರರ ಪರ ವಕೀಲ ವಿಶಾಲ್ ತಿವಾರಿ ಅರ್ಜಿ ಸಲ್ಲಿಸಿದ್ದರು.
ಉತ್ತರ ಪ್ರದೇಶ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ, "ಈಗಾಗಲೇ ಉತ್ತರ ಪ್ರದೇಶ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪ್ರಯಾಗ್‌ರಾಜ್ ಕೋರ್ಟ್‌ನಲ್ಲೂ ಕೂಡ ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಲಾಗಿದೆ" ಎಂದು ತಿಳಿಸಿದರು.