ಕರ್ನಾಟಕ

karnataka

ETV Bharat / bharat

ಮಹಾರಾಷ್ಟ್ರ ಚುನಾವಣೆ ಫಲಿತಾಂಶ: ಅಜಿತ್ ಪವಾರ್ ಬಣ ಮುನ್ನಡೆ, ಪವರ್​ ಕಳೆದುಕೊಂಡ ಶರದ್​!

ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಶರದ್​ ಪವಾರ್ ಬಣ ಕೇವಲ 5 ಸ್ಥಾನಗಳಲ್ಲಿ ಜಯ ಗಳಿಸಿದೆ.

ಅಜಿತ್ ಪವಾರ್
ಅಜಿತ್ ಪವಾರ್ (ANI)

By ETV Bharat Karnataka Team

Published : Nov 23, 2024, 4:58 PM IST

ಮುಂಬೈ(ಮಹಾರಾಷ್ಟ್ರ): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎಸ್​ಸಿಪಿ) ಮುಖಂಡ ಅಜಿತ್ ಪವಾರ್ ಅವರು, ತಮ್ಮ ಚಿಕ್ಕಪ್ಪ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರನ್ನು ದಿಗ್ಭ್ರಮೆಗೊಳಿಸಿದ್ದಾರೆ.

ಚುನಾವಣಾ ಆಯೋಗದ ಅಂಕಿ - ಅಂಶಗಳ ಪ್ರಕಾರ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 21 ಕ್ಷೇತ್ರಗಳಲ್ಲಿ ಜಯ ಸಾಧಿಸಿ, 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ, ಶರದ್​ ಪವಾರ್ ಬಣ ಕೇವಲ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ, 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಾರಾಮತಿ ವಿಧಾನಸಭಾ ಕ್ಷೇತ್ರದಲ್ಲಿ ಅಜಿತ್ ಪವಾರ್ ಮತ್ತು ಯುಗೇಂದ್ರ ಶ್ರೀನಿವಾಸ್ ಪವಾರ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಆದರೆ ಮರಾಠ ಸಮುದಾಯದ ಪ್ರಬಲ ನಾಯಕ ಅಜಿತ್ ಪವಾರ್ 99,045 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ (ECI)

ಇಂದಾಪುರ ವಿಧಾನಸಭಾ ಕ್ಷೇತ್ರ ಎನ್‌ಸಿಪಿ ಮತ್ತು ಎನ್‌ಸಿಪಿಗೆ (ಎಸ್‌ಪಿ) ಪ್ರತಿಷ್ಠೆಯ ಕಣವಾಗಿದ್ದು, ಇಲ್ಲಿ ಎನ್‌ಸಿಪಿ ಅಭ್ಯರ್ಥಿ ದತ್ತಾತ್ರೆ ಭರಣೆ 20,725 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಹರ್ಷವರ್ಧನ್ ಪಾಟೀಲ್ ಎರಡನೇ ಸ್ಥಾನದಲ್ಲಿದ್ದಾರೆ.

ಪುಣೆ ಜಿಲ್ಲೆಯ ಅಂಬೆಗಾಂವ್ ವಿಧಾನಸಭಾ ಕ್ಷೇತ್ರದಲ್ಲೂ ಎನ್‌ಸಿಪಿಯೇ ಮೇಲುಗೈ ಸಾಧಿಸಿದೆ. ಎನ್​ಸಿಪಿ ಅಭ್ಯರ್ಥಿ ಮತ್ತು ಮಹಾರಾಷ್ಟ್ರದ ಮಾಜಿ ವಿಧಾನಸಭಾ ಸ್ಪೀಕರ್ ದಿಲೀಪ್ ವಾಲ್ಸೆ ಪಾಟೀಲ್ 1,523 ಸಾವಿರ ಮತಗಳ ಅಂತರದಿಂದ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ದೇವದತ್ತ ನಿಕಮ್ ವಿರುದ್ಧ ಜಯ ಸಾಧಿಸಿದ್ದಾರೆ.

ಇದನ್ನೂ ಓದಿ:ಜಾರ್ಖಂಡ್​ ವಿಧಾನಸಭಾ ಚುನಾವಣೆ ಫಲಿತಾಂಶ: ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಮುನ್ನಡೆ, ಬಿಜೆಪಿಗೆ ಹಿನ್ನಡೆ

ABOUT THE AUTHOR

...view details