ಕರ್ನಾಟಕ

karnataka

ETV Bharat / bharat

ಮುಂದಿನ ವಾರ ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ ಸಾಧ್ಯತೆ

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಮುಂದಿನ ವಾರ ಪ್ರಕಟಿಸುವ ಸಾಧ್ಯತೆಯಿದೆ.

By ETV Bharat Karnataka Team

Published : 5 hours ago

ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ
ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ (ETV Bharat)

ನವದೆಹಲಿ:ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಮುಂದಿನ ವಾರ ಪ್ರಕಟಿಸುವ ಸಾಧ್ಯತೆಯಿದೆ. ನವೆಂಬರ್ ಎರಡನೇ ಅಥವಾ ಮೂರನೇ ವಾರದಲ್ಲಿ ಮತದಾನ ನಡೆಸಲು ಆಯೋಗ ಮುಂದಾಗಿದೆ ಎಂದು ತಿಳಿದುಬಂದಿದೆ.

ಇವುಗಳ ಜೊತೆಗೆ ವಿವಿಧ ರಾಜ್ಯಗಳ 45 ವಿಧಾನಸಭೆ ಮತ್ತು ಎರಡು ಸಂಸತ್ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕೇರಳದ ವಯನಾಡು ಕ್ಷೇತ್ರವೂ ಇದರಲ್ಲಿ ಸೇರಿದೆ.

ಇತ್ತೀಚೆಗಷ್ಟೇ ಹರಿಯಾಣ ಮತ್ತು ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆ ಮುಗಿದಿದೆ. 370 ನೇ ವಿಧಿ ರದ್ದುಗೊಳಿಸಿದ ನಂತರದ ಮೊದಲ ಚುನಾವಣೆ ಇದಾಗಿತ್ತು. ಭಾರತ ಚುನಾವಣಾ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ಚುನಾವಣೆಗಳನ್ನು ಮುಗಿಸಿದೆ. ಇದೀಗ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಜ್ಜಾಗಿದೆ.

ಇನ್ನು ಕೆಲವೇ ದಿನಗಳಲ್ಲಿ ಈ ಎರಡು ರಾಜ್ಯಗಳ ಚುನಾವಣಾ ಅಧಿಸೂಚನೆಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡುವ ಸಾಧ್ಯತೆ ಇದೆ. ನವೆಂಬರ್ ಎರಡನೇ ಅಥವಾ ಮೂರನೇ ವಾರದಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 29 ಮತ್ತು ನವೆಂಬರ್ 3 ರ ನಡುವೆ ದೀಪಾವಳಿ ಮತ್ತು ಛಾತ್‌ ಹಬ್ಬಗಳ ಕಾರಣ ನವೆಂಬರ್ ಎರಡನೇ ಅಥವಾ ಮೂರನೇ ವಾರದಲ್ಲಿ ಚುನಾವಣೆ ನಡೆಸಲು ಆಯೋಗ ಯೋಜಿಸುತ್ತಿದೆ. ಮಹಾರಾಷ್ಟ್ರದಲ್ಲಿ ನೆಲೆಸಿರುವ ಬಿಹಾರಿ ಮತದಾರರು ಈ ಹಬ್ಬಗಳ ಸಂದರ್ಭದಲ್ಲಿ ತಮ್ಮ ಊರುಗಳಿಗೆ ತೆರಳುವ ಸಾಧ್ಯತೆಯಿದೆ. ಹೀಗಾಗಿ, ನವೆಂಬರ್ ಮೊದಲ ವಾರದ ನಂತರ ಚುನಾವಣೆ ನಡೆಸಲು ಇಸಿ ನಿರ್ಧರಿಸಿದೆ.

45 ಸ್ಥಾನಗಳಲ್ಲಿ ಉಪಚುನಾವಣೆ:ರಾಜ್ಯಗಳ ವಿಧಾನಸಭಾ ಚುನಾವಣೆಯ ಜೊತೆಗೆ, ಹಲವು ರಾಜ್ಯಗಳಲ್ಲಿ ಉಪಚುನಾವಣೆಗಳೂ ನಡೆಯಬೇಕಿದೆ. ವಿವಿಧ ರಾಜ್ಯಗಳ 45 ವಿಧಾನಸಭಾ ಕ್ಷೇತ್ರಗಳು ಮತ್ತು ಎರಡು ಸಂಸತ್ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ರಾಜೀನಾಮೆ ನೀಡಿದ ಕೇರಳದ ವಯನಾಡ್‌ ಕ್ಷೇತ್ರವೂ ಇದರಲ್ಲಿ ಸೇರಿದೆ. ಉತ್ತರ ಪ್ರದೇಶದ ಅಮೇಠಿಯಲ್ಲಿ ಗೆಲುವು ಸಾಧಿಸಿದ್ದ ರಾಹುಲ್ ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟ ನಂತರ ಆ ಸ್ಥಾನ ತೆರವಾಗಿತ್ತು.

ಇದನ್ನೂ ಓದಿ:4 ವರ್ಷದಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೆ 47 ಸಾವಿರ ದೂರು: ಜಾತಿ ನಿಂದನೆ ಕೇಸ್​​ಗಳೇ ಹೆಚ್ಚು

ABOUT THE AUTHOR

...view details