ನವದೆಹಲಿ: ರಾಷ್ಟ್ರಪತಿ ಭವನಕ್ಕೆ ಆಗಮಿಸಿದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತ ಮಾಡಿದರು.
ಭಾರತದೊಂದಿಗಿನ ದ್ವಿಪಕ್ಷೀಯ ಮಾತುಕತೆಗಾಗಿ ಮೊಹಮ್ಮದ್ ಮುಯಿಝು ಮತ್ತು ಮಾಲ್ಡೀವ್ಸ್‌ನ ಪ್ರಥಮ ಮಹಿಳೆ ಸಾಜಿದಾ ಮೊಹಮದ್ ಭಾನುವಾರದಂದು ನವದೆಹಲಿಗೆ ಬಂದಿಳಿದಿದ್ದಾರೆ. ಈ ವೇಳೆ ಅವರನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಉನ್ನತ ಮಟ್ಟದ ನಿಯೋಗದೊಂದಿಗೆ ಆತ್ಮೀಯ ಸ್ವಾಗತ ಕೋರಿದರು.
ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಇದಕ್ಕೂ ಮುನ್ನ ಅವರು ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು. ನಂತರದಲ್ಲಿ ಅವರು ಪ್ರಧಾನಿ ಮೋದಿ ಅವರೊಂದಿಗೆ ಹೈದರಾಬಾದ್ ಹೌಸ್ನಲ್ಲಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮ ಅವರ ಅಧಿಕೃತ ಆಹ್ವಾನದ ಮೇರೆಗೆ ಮೊಹಮ್ಮದ್ ಮುಯಿಝು ಅಕ್ಟೋಬರ್ 6 ರಿಂದ 10 ದಿನಗಳ ಕಾಲ ಅವರು ಭಾರತದ ಪ್ರವಾಸ ನಡೆಸಲಿದ್ದಾರೆ. ಈ ವೇಳೆ ಅವರು ಉದ್ಯಮ ಕಾರ್ಯಕ್ರಮ ಹಿನ್ನೆಲೆ ಬೆಂಗಳೂರು ಮತ್ತು ಮುಂಬೈಗೂ ಕೂಡ ಭೇಟಿ ನೀಡಲಿದ್ದಾರೆ.