ಹೈದರಾಬಾದ್ (ತೆಲಂಗಾಣ):ತೆಲಂಗಾಣದ ಕಿಶನ್ ರೆಡ್ಡಿ ಮತ್ತು ಬಂಡಿ ಸಂಜಯ್ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಬಿಜೆಪಿಯ ರಾಜ್ಯ ನಾಯಕರು ರಾಷ್ಟ್ರೀಯ ರಾಜಕಾರಣದಲ್ಲಿ ಮಿಂಚಲಿದ್ದಾರೆ. ಇದರಿಂದ ತೆಲಂಗಾಣದ ರಾಜ್ಯ ಬಿಜೆಪಿ ಪಕ್ಷದಲ್ಲಿಯೂ ಪ್ರಮುಖ ಬದಲಾವಣೆಗಳನ್ನು ಆಗುವ ಸಾಧ್ಯತೆ ಹೆಚ್ಚಿದೆ.
ಕಿಶನ್ ರೆಡ್ಡಿ ಈಗಾಗಲೇ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಜೆಪಿಯಲ್ಲಿ ಒಬ್ಬರಿಗೆ ಎರಡು ಸ್ಥಾನಗಳನ್ನು ನೀಡುವುದು ಅಪರೂಪವಾಗಿದ್ದು, ಕಿಶನ್ ರೆಡ್ಡಿ ಬದಲಿಗೆ ಪಕ್ಷದ ನೂತನ ಅಧ್ಯಕ್ಷರನ್ನು ನೇಮಿಸುವ ಸಾಧ್ಯತೆ ಇದೆ. ಈ ಹುದ್ದೆಯಲ್ಲಿ ಮಲ್ಕಾಜ್‌ಗಿರಿ ಸಂಸದ ಎಟೆಲಾ ರಾಜೇಂದರ್ ಅವರನ್ನು ನೇಮಿಸುವ ಸಾಧ್ಯತೆ ಇದೆ. ಜೊತೆಗೆ ಹೊಸ ಹೆಸರುಗಳನ್ನೂ ಪರಿಗಣಿಸಬಹುದು ಎಂದು ಪಕ್ಷದ ಹಲವು ಮುಖಂಡರು ವಿಶ್ಲೇಷಿಸುತ್ತಿದ್ದಾರೆ. ಬಂಡಿ ಸಂಜಯ್ ಈಗಾಗಲೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.