ನವದೆಹಲಿ:ಮಣಿಪುರದಲ್ಲಿ ಇತ್ತೀಚಿನ ಹಿಂಸಾತ್ಮಕ ಸಂಘರ್ಷಗಳು ಮತ್ತು ಮುಂದುವರಿದ ರಕ್ತಪಾತಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿ ಆ ಪ್ರದೇಶದಲ್ಲಿ ಶಾಂತಿ ಮರುಸ್ಥಾಪಿಸಲು ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇಲ್ಲಿನ ನದಿಯೊಂದರಲ್ಲಿ ಆರು ಜನರ ಮೃತದೇಹವನ್ನು ಹೊರತೆಗೆದ ಒಂದು ದಿನದ ಬಳಿಕ ಶನಿವಾರ, ಪ್ರತಿಭಟನಾಕಾರರು ಮೂವರು ಸಚಿವರು ಹಾಗೂ 6 ಶಾಸಕರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಇದಾದ ಬಳಿಕ ಸರ್ಕಾರ, ರಾಜ್ಯದ 5 ಜಿಲ್ಲೆಗಳಲ್ಲಿ ಅನಿರ್ಧಿಷ್ಟಾವಧಿಗೆ ಕರ್ಫ್ಯೂ ಹೇರಿದೆ. ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಇಂಫಾಲದಲ್ಲಿ ಕೋಪೋದ್ರಿಕ್ತ ಪ್ರತಿಭಟನಾಕಾರರು, ಮೂವರು ಶಾಸಕರ ಮನೆಗಳನ್ನು ಲೂಟಿ ಮಾಡಿದ್ದಾರೆ. ಇದರಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಅಳಿಯನ ಮನೆಯೂ ಸೇರಿದೆ. ಮನೆಗಳಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು.