ನವದೆಹಲಿ: ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿಯತ್ತ ಪ್ರತಿಭಟನಾ ಮೆರವಣಿಗೆ ಕೈಗೊಂಡಿದ್ದು, ದೆಹಲಿ-ನೋಯ್ಡಾ ಗಡಿಯಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಇದರ ಪರಿಣಾಮ, ಟ್ರಾಫಿಕ್ ಸಮಸ್ಯೆ ಉಂಟಾಗಿ ಪ್ರಯಾಣಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಡ್ರೋನ್ಗಳ ಮೂಲಕ ಪರಿಸ್ಥಿತಿ ಮೇಲ್ವಿಚಾರಣೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮುಂದಾಗಿದ್ದು, ನಿಯಂತ್ರಣ ಹರಸಾಹಸದ ಕೆಲಸವಾಗಿದೆ.
ಪೂರ್ವ ದೆಹಲಿ ಗಡಿಯಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ. ಈ ಪ್ರದೇಶಗಳಲ್ಲಿ ಸುಗಮ ವಾಹನ ಸಂಚಾರಕ್ಕೆ ಡ್ರೋನ್ ಮೂಲಕ ಕಣ್ಗಾವಲಿರಿಸಲಾಗಿದೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಾಗರ್ ಸಿಂಗ್ ಕಲ್ಸಿ ತಿಳಿಸಿದರು.