ಮುಲುಗು:ತೆಲಂಗಾಣದ ಮುಲುಗು ಜಿಲ್ಲೆಯ ಏಟೂರು ನಾಗಾರಂ ಚಲಪಾಕ್ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಏಳು ಜನ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತೆಲಂಗಾಣ ಗ್ರೆಹೌಂಡ್ಸ್ ಮತ್ತು ನಕ್ಸಲ್ ನಿಗ್ರಹ ಪಡೆಯ ಜಂಟಿ ಕಾರ್ಯಾಚರಣೆ ನಡೆಸಿ, 7 ಜನ ನಕ್ಸಲರನ್ನು ಎನ್ಕೌಂಟರ್ ಮಾಡಿದೆ. ಹತ ನಕ್ಸಲರನ್ನು ಇಲ್ಲಂದು ನರ್ಸಂಪೇಟ್ ಏರಿಯಾದ ಕಮಿಟಿ ಕಾರ್ಯದರ್ಶಿ ಬದ್ರು ಅಲಿಯಾಸ್ ಪಾಪಣ್ಣ (35), ಮಧು(43), ಕರುಣಾಕರ್ (22), ಜೈಸಿಂಗ್ (25), ಕಿಶೋರ್ (22) ಮತ್ತು ಕಾಮೇಶ್ (23) ಹಾಗೂ ಜಮುನ (23) ಎಂದು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ನಕ್ಸಲರ ಚಲನವಲನದ ಮಾಹಿತಿ ಆಧರಿಸಿ ನಕ್ಸಲ್ ನಿಗ್ರಹ ಪಡೆ ಮತ್ತು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.
ಗುಂಡಿನ ಚಕಮಕಿಯಲ್ಲಿ 7 ಜನ ನಕ್ಸಲರು ಹತರಾಗಿದ್ದಾರೆ. ಸ್ಥಳದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರಿದಿದ್ದು, ಎಕೆ 47 ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಮಾಹಿತಿ ಆಧರಿಸಿ ಪೊಲೀಸರು ಗಡಿ ಭಾಗಕ್ಕೆ ತೆರಳಿ ಕಾರ್ಯಾಚರಣೆಗಿಳಿದಾಗ ನಕ್ಸಲರು ಗುಂಡಿನ ದಾಳಿ ಮಾಡಲು ಆರಂಭಿಸಿದ್ದರು. ಆಗ ಪೊಲೀಸರು ಪ್ರತಿ ದಾಳಿ ಮಾಡಿದ್ದು, 7 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.