ಹೈದರಾಬಾದ್ (ತೆಲಂಗಾಣ):ಹೈದರಾಬಾದ್ನಲ್ಲಿ ಮತ್ತೊಂದು ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜಿಯಾಗುಡದ ವೆಂಕಟೇಶ್ವರ ನಗರದಲ್ಲಿರುವ ಫರ್ನಿಚರ್ ಮತ್ತು ರೆಗ್ಗೆನ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಒಟ್ಟು 20 ಮಂದಿ ಸಿಲುಕಿದ್ದು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ತಂದೆ ಮತ್ತು ಮಗಳು ಮೃತಪಟ್ಟಿದ್ದಾರೆ. ಇನ್ನು ಒಂದೇ ಕುಟುಂಬದ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Furniture Godown Fire Accident in Hyderabad: ತೆಲಂಗಾಣ ರಾಜ್ಯ ರಾಜಧಾನಿ ಹೈದರಾಬಾದ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕುಲ್ಸುಂಪುರ ಜಿಯಾಗುಡಾದ ವೆಂಕಟೇಶ್ವರ ನಗರದಲ್ಲಿ ಪೀಠೋಪಕರಣ ತಯಾರಿಕಾ ಗೋದಾಮಿನಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಮೂರು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಸುಮಾರು 20 ಕಾರ್ಮಿಕರು ಸಿಲುಕಿದ್ದು, ಅವರನ್ನು ಅಗ್ನಿಶಾಮಕ ಸಿಬ್ಬಂದಿ ಏಣಿ ಬಳಸಿ ಕೆಳಕ್ಕೆ ಇಳಿಸಿದ್ದಾರೆ. ಆದರೆ ಅವರಲ್ಲಿ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಂದೆ ಮತ್ತು ಮಗಳು ಮೃತಪಟ್ಟಿದ್ದು, ಮತ್ತೊಂದು ಕುಟುಂಬದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಮೃತರನ್ನು ಶ್ರೀನಿವಾಸ್ ಮತ್ತು ಶಿವಪ್ರಿಯಾ ಎಂದು ಪೊಲೀಸರು ಗುರುತಿಸಿದ್ದಾರೆ.
ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ 10 ಅಗ್ನಿಶಾಮಕ ಯಂತ್ರಗಳ ಮೂಲಕ ಬೆಂಕಿಯನ್ನು ನಿಯಂತ್ರಿಸುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಕೆಳ ಮಹಡಿಯಿಂದ ಮೇಲಿನ ಭಾಗಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಶಂಕಿಸಿದ್ದಾರೆ.