ನವದೆಹಲಿ:ರಾಜಧಾನಿ ದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಸೋಮವಾರ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಸುದ್ದಿ ತಿಳಿದ ತಕ್ಷಣ ಹಾಸ್ಟೆಲ್‌ನಲ್ಲಿ ಸಂಚಲನ ಮೂಡಿಸಿತ್ತು. ಈ ವಿಷಯವನ್ನು ಪೊಲೀಸರಿಗೆ ರವಾನಿಸಲಾಗಿತ್ತು. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ನಿನ್ನೆ ಮಧ್ಯಾಹ್ನ 1.30ರ ಸುಮಾರಿಗೆ ಕಾಲೇಜು ಹಾಸ್ಟೆಲ್‌ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ. ಶವದ ಬಳಿ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರಿಂದ ಬಂದ ಮಾಹಿತಿ ಪ್ರಕಾರ ವಿದ್ಯಾರ್ಥಿನಿ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮಧ್ಯಾಹ್ನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭಿಸಿತು. ಕೂಡಲೇ ನಮ್ಮ ತಂಡ ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ಕೈಗೊಂಡಿತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬ ಹಾಗೂ ಆಕೆಯ ಸ್ನೇಹಿತರನ್ನು ವಿಚಾರಣೆ ನಡೆಸಲಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಯತ್ನಿಸಲಾಗುತ್ತಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಾಸ್ಟೆಲ್ ಕೊಠಡಿಯ ತನಿಖೆಗೆ ವಿಧಿವಿಜ್ಞಾನ ತಂಡ ಸಹ ಕರೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.