ಬೀಡ್, ಮಹಾರಾಷ್ಟ್ರ:ಪೊಲೀಸ್ ನೇಮಕಾತಿ ಪರೀಕ್ಷೆಗೆ ತಯಾರಿ ಮಾಡುತ್ತಿದ್ದ ಐವರ ಮೇಲೆ ಹರಿದ ಮಹಾರಾಷ್ಟ್ರ ಸಾರಿಗೆ ಬಸ್. ಸ್ಥಳದಲ್ಲೇ ಮೂವರು ಪರೀಕ್ಷಾರ್ಥಿಗಳ ಸಾವು. ಇದರಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀಡ್ ತಾಲೂಕಿನ ಘೋಡ್ಕ ರಾಜೂರಿ ಬಳಿ ನಡೆದಿದೆ.
ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬೀಡಿನಿಂದ ಪರ್ಭಾನಿಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪೊಲೀಸ್ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವಕರಿಗೆ ಡಿಕ್ಕಿ ಹೊಡೆದಿದೆ. ಅವರಲ್ಲಿ ಇಬ್ಬರು ವೇಗವಾಗಿ ಬರುತ್ತಿದ್ದ ಬಸ್ ನೋಡಿ ಬೇರೆ ಕಡೆ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನು ಮೂವರಿಗೆ ಅಪಾಯದಿಂದ ಪಾರಾಗಲು ಸಾಧ್ಯವಾಗಿಲ್ಲ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.