ಮಿರ್ಜಾಪುರ, ಉತ್ತರಪ್ರದೇಶ: ವಾರಾಣಸಿ - ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯ ಕಚ್ವಾನ್ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳು.
ಟ್ರ್ಯಾಕ್ಟರ್ ಟ್ರ್ಯಾಲಿಗೆ ಹಿಂಬದಿಯಿಂದ ಬಂದು ಗುದ್ದಿದ ಲಾರಿ:ಗುರುವಾರ ರಾತ್ರಿ 1 ಗಂಟೆಗೆ ಮಿರ್ಜಾಪುರದ ಕಚ್ವಾನ್ ಪ್ರದೇಶದ ಕಟ್ಕಾ ಗ್ರಾಮದ ಬಳಿ ವಾರಾಣಸಿ - ಪ್ರಯಾಗರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ, ವೇಗವಾಗಿ ಬಂದ ಟ್ರಕ್ ಕಾರ್ಮಿಕರ ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇದರಿಂದ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ. ಇದರಿಂದ ವಾಹನದಲ್ಲಿ ಪ್ರಯಾಣಿಸುತ್ತಿದ್ದ 10 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ವಾರಾಣಸಿ ನಿವಾಸಿಗಳಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ 10 ಮಂದಿಯ ದುರ್ಮರಣ, ಮೂವರ ಸ್ಥಿತಿ ಗಂಭೀರ (ETV Bharat) ಲಾರಿ ಚಾಲಕ ಪರಾರಿ: ಅಪಘಾತದ ಬಳಿಕ ಲಾರಿ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಸ್ಥಳದಲ್ಲಿ ಜನರ ಗುಂಪು ಜಮಾಯಿಸಿತ್ತು. ಮಾಹಿತಿ ಪಡೆದು ಪೊಲೀಸರೂ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಪೊಲೀಸರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿದ್ದಾರೆ. ಭದೋಹಿ ಜಿಲ್ಲೆಯಿಂದ ಮೇಲ್ಛಾವಣಿಯನ್ನು ಎರಕಹೊಯ್ದ ನಂತರ ಎಲ್ಲ ಕಾರ್ಮಿಕರು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ತಮ್ಮ ಮನೆಗಳಿಗೆ ಮರಳುತ್ತಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಅಪಘಾತದಲ್ಲಿ ಬೀರಬಲ್‌ಪುರ ಮಿರ್ಜಾಮುರಾದ್ ನಿವಾಸಿ ಆಕಾಶ್ ಕುಮಾರ್, ಬೀರಬಲ್‌ಪುರ ಮಿರ್ಜಾಮುರಾದ್‌ನ ಜಮುನಿ, ಬೀರಬಲ್‌ಪುರ ಮಿರ್ಜಾಮುರಾದ್ ನಿವಾಸಿ ಅಜಯ್ ಸರೋಜ್ ಗಾಯಗೊಂಡಿದ್ದಾರೆ. ಇವರೆಲ್ಲರೂ ಕೂಡ ವಾರಾಣಸಿಯ ನಿವಾಸಿಗಳು.
ಘಟನೆ ಬಗ್ಗೆ ಎಸ್ಪಿ ಹೇಳಿದ್ದಿಷ್ಟು:ಟ್ರಕ್ ಹಿಂಬದಿಯಿಂದ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ. ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 3 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.
ಇದನ್ನು ಓದಿ:ಸಚಿವೆ ಕೊಂಡಾ ಸುರೇಖಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟ ನಾಗಾರ್ಜುನ - Actor Nagarjuna