ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ ಮಳೆಯಾಗಿದೆ. 2019ರ ನಂತರ ಒಂದೇ ದಿನ 300 ಮಿ.ಮೀ ಮಳೆ ಸುರಿದಿದೆ. ಈ ಪರಿಸ್ಥಿತಿ ಇನ್ನೂ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.
ಸಬ್ ಅರ್ಬನ್ ರೈಲ್ವೇ ಸ್ಟೇಷನ್ಲ್ಲಿ 268 ಮಿ.ಮೀ ಮಳೆಯಾಗಿದೆ. ದೈನಂದಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದೂ ಕೂಡ ಶಾಲಾ, ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.
ರೈಲು ಹಳಿಗಳ ಮೇಲೆ ನೀರು ನಿಂತಿದೆ. ನಗರದ ಅನೇಕ ಪ್ರದೇಶಗಳಲ್ಲಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಬೆಳಗ್ಗಿನವರೆಗೆ ಸತತ ಆರು ಗಂಟೆಗಳ ಕಾಲ 300 ಮಿ.ಮೀ ದಾಖಲೆ ಮಳೆಯಾಗಿದೆ. ತಗ್ಗು ಪ್ರದೇಶಗಳು, ರಸ್ತೆಗಳು ಸಂಪೂರ್ಣ ಜಲಮಯವಾಗಿದೆ.