ಮುಂಬೈ(ಮಹಾರಾಷ್ಟ್ರ): ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಎರಡು ವಾರಗಳ ಸುದೀರ್ಘ ಚರ್ಚೆ ನಡೆಸಿದ ನಂತರ ಲೋಕಸಭಾ ಚುನಾವಣೆಗೆ ರಾಜ್ಯದ 48 ಸ್ಥಾನಗಳಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. ಈ ಒಪ್ಪಂದದಂತೆ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣ) 21 ಸ್ಥಾನ, ಕಾಂಗ್ರೆಸ್ 17 ಸ್ಥಾನ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ) 10 ಸ್ಥಾನಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಜಂಟಿಯಾಗಿ ಸೀಟು ಹಂಚಿಕೆಯನ್ನು ಘೋಷಿಸಿದ್ದಾರೆ.
ಎಲ್ಲೆಲ್ಲಿ ಯಾವಾಗ ಮತದಾನ?:ಲೋಕಸಭೆ ಚುನಾವಣೆ ರಾಜ್ಯದಲ್ಲಿ ಏಪ್ರಿಲ್ 19 ರಿಂದ ಮೇ 20 ರವರೆಗೆ ಐದು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 19 ರಂದು ರಾಮ್‌ಟೆಕ್, ನಾಗ್ಪುರ, ಭಂಡಾರಾ - ಗೊಂಡಿಯಾ, ಗಡ್ಚಿರೋಲಿ-ಚಿಮೂರ್ ಮತ್ತು ಚಂದ್ರಾಪುರದಲ್ಲಿ ಮತದಾನ ನಡೆಯಲಿದೆ. ಬುಲ್ಧಾನ, ಅಕೋಲಾ , ಅಮರಾವತಿ, ವಾರ್ಧಾ, ಯವತ್ಮಾಲ್-ವಾಶಿಮ್, ಹಿಂಗೋಲಿ, ನಾಂದೇಡ್ ಮತ್ತು ಪರ್ಭಾನಿ ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.