ಶ್ರೀನಗರ:ಜಮ್ಮು- ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ನ್ಯಾಷನಲ್ ಕಾನ್ಫ್ರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿ ಬಹುಮತದತ್ತ ದಾಪುಗಾಲಿಡುತ್ತಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು, ನಾಯಕರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸ್ಪಷ್ಟ ಬಹುಮತದ ನಿರೀಕ್ಷೆಯಲ್ಲಿರುವ ನ್ಯಾಷನಲ್ ಕಾನ್ಫ್ರೆನ್ಸ್ 'ಮುಂದಿನ ಸಿಎಂ ಒಮರ್ ಅಬ್ದುಲ್ಲಾ' ಎಂದು ಘೋಷಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎನ್ಸಿ ಪಕ್ಷದ ನೇತಾರ ಫಾರೂಕ್ ಅಬ್ದುಲ್ಲಾ, 370ನೇ ವಿಧಿ ರದ್ದತಿಯ ವಿರುದ್ಧ ಕಣಿವೆಯ ಜನರು ಮತ ಹಾಕಿದ್ದಾರೆ ಎಂಬುದಕ್ಕೆ ಈ ತೀರ್ಪು ಸಾಕ್ಷಿ ಎಂದು ಹೇಳಿದರು.
ಮೈತ್ರಿಕೂಟದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಒಮರ್ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ಮಿತ್ರ ಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಎನ್ಸಿ ಅಧಿಕಾರಕ್ಕೆ ಬರಲಿದೆ ಎಂದರು.