ಕರ್ನಾಟಕ

karnataka

ETV Bharat / bharat

ಮುಂಬೈನಲ್ಲಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿಗೆ ಗುಂಡಿಕ್ಕಿ ಹತ್ಯೆ - NCP LEADER SHOT DEAD

ಗುಂಡಿಕ್ಕಿ ಎನ್​ಸಿಪಿ ನಾಯಕ ಬಾಬಾ ಸಿದ್ದಿಕಿ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.

ಮುಂಬೈನಲ್ಲಿ ಗುಂಡಿಕ್ಕಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ
ಮುಂಬೈನಲ್ಲಿ ಗುಂಡಿಕ್ಕಿ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ (ETV Bharat)

By ETV Bharat Karnataka Team

Published : Oct 12, 2024, 11:03 PM IST

ಮುಂಬೈ: ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ನಾಯಕ ಮತ್ತು ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈಯ್ದಿದ್ದಾರೆ. ಇಲ್ಲಿನ ಉಪನಗರ ಬಾಂದ್ರಾ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ.

ಗುಂಡಿನ ದಾಳಿ ಬಳಿಕ ಸಿದ್ದಿಕ್ ಅವರನ್ನು ಲೀಲಾವತಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಸಿದ್ದಿಕಿ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ.

ನಿರ್ಮಲ್ ನಗರದ ಕೋಲ್ಗೆಟ್ ಮೈದಾನದ ಬಳಿಯಿರುವ ಅವರ ಪುತ್ರ ಮತ್ತು ಶಾಸಕ ಜೀಶನ್ ಸಿದ್ದಿಕಿ ಕಚೇರಿಯ ಹೊರಗೆ ಗುಂಡಿನ ದಾಳಿ ನಡೆದಿದೆ. ಎರಡರಿಂದ ಮೂರು ಸುತ್ತು ಗುಂಡು ಹಾರಿಸಲಾಗಿದೆ. ಪೊಲೀಸರು ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಲಿವುಡ್ ತಾರೆಯರಾದ ಸಲ್ಮಾನ್ ಖಾನ್ ಮತ್ತು ಶಾರುಖ್ ಖಾನ್ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಸಿದ್ದಿಕಿ ಇತ್ತೀಚೆಗೆ ಕಾಂಗ್ರೆಸ್‌ ಬಿಟ್ಟು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರಿದ್ದರು. ಇವರು ಮೂರು ಬಾರಿ ಶಾಸಕರಾಗಿದ್ದರು.

ಇದನ್ನೂ ಓದಿ: ವಾಸ್ತವವಾಗಿ ಬಿಜೆಪಿಯೇ ಒಂದು ಉಗ್ರಗಾಮಿಗಳ ಪಕ್ಷವಾಗಿದೆ : ಮಲ್ಲಿಕಾರ್ಜುನ ಖರ್ಗೆ

ABOUT THE AUTHOR

...view details