ಕೋಟಾ(ರಾಜಸ್ಥಾನ): ಸದ್ಯ ವಿದ್ಯಾರ್ಥಿಗಳು ಹೆಚ್ಚಾಗಿ ಎಂಬಿಬಿಎಸ್ ವ್ಯಾಸಂಗ ಮಾಡಲು ಇಚ್ಛಿಸುತ್ತಿದ್ದಾರೆ. ಆಯುಷ್ ಕೋರ್ಸ್‌ಗಳ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಹೆಚ್ಚು ಒಲವು ತೋರುತ್ತಿಲ್ಲ. ಇದರಿಂದ ನೀಟ್ - ಯುಜಿಯಲ್ಲಿ ಕಡಿಮೆ ಅಂಕ ಪಡೆದವರಿಗೂ ಈ ಕೋರ್ಸ್‌ಗಳ ಸೀಟ್ ಸಿಗುತ್ತಿದೆ.
ಬ್ಯಾಚುಲರ್ ಆಫ್ ಆಯುರ್ವೇದಿಕ್ ಮೆಡಿಸಿನ್ ಮತ್ತು ಸರ್ಜರಿ (ಬಿಎಎಂಎಸ್) ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಆಸಕ್ತಿ ತೋರುತ್ತಿಲ್ಲ. ಇದರಿಂದ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಡಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ವೈದ್ಯಕೀಯ ಪದ್ಧತಿಯ ರಾಷ್ಟ್ರೀಯ ಆಯೋಗ (NCISM), ಎಲ್ಲ ವರ್ಗಗಳಿಗೆ ಬಿಎಎಂಎಸ್ ಕೋರ್ಸ್ ಪ್ರವೇಶಕ್ಕಾಗಿ ಕನಿಷ್ಠ ಅರ್ಹತೆ ಅಂಕಗಳನ್ನು ಶೇ.15 ರಷ್ಟಕ್ಕೆ ಇಳಿಸಿದೆ. ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೋರ್ಸ್‌ಗಳ ಪ್ರವೇಶ ಪಡೆಯಲು ಉತ್ತೇಜಿಸಲಾಗುತ್ತಿದೆ. ಇದರಿಂದ ಬಿಎಎಂಎಸ್‌ನ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡಬಹುದಾಗಿದೆ.
ಶಿಕ್ಷಣ ತಜ್ಞ ದೇವ್ ಶರ್ಮಾ ಹೇಳಿದ್ದೇನು?: ಹೋಮಿಯೋಪತಿ, ಯುನಾನಿ ಮತ್ತು ಆಯುರ್ವೇದ ವೈದ್ಯಕೀಯ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳು ನಿರಾಸಕ್ತಿ ಹೊಂದಿದ್ದಾರೆ. ಇದರಿಂದ ಈ ಕೋರ್ಸ್ಗಳು ದುಃಸ್ಥಿತಿಗೆ ತಲುಪಿವೆ ಎಂದು ಶಿಕ್ಷಣ ತಜ್ಞ ದೇವ್ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.
ಬಿಎಎಂಎಸ್‌ನಲ್ಲಿ ಪ್ರವೇಶಕ್ಕಾಗಿ ಸಾಮಾನ್ಯ ಮತ್ತು ಇಡಬ್ಲ್ಯೂಎಸ್ ವರ್ಗಗಳಿಗೆ ಶೇಕಡಾವಾರು ಅಂಕ 50 ರಷ್ಟು ಇದ್ದು, ಅದನ್ನು ಈಗ ಶೇ.15 ರಷ್ಟು ಕಡಿಮೆ ಮಾಡಿ ಶೇ.35ಕ್ಕೆ ಇಳಿಸಲಾಗಿದೆ. ಅದೇ ರೀತಿ, ಒಬಿಸಿ, ಎನ್‌ಸಿಎಲ್, ಎಸ್‌ಸಿ ಮತ್ತು ಎಸ್‌ಟಿ ವರ್ಗಗಳಿಗೆ ಕನಿಷ್ಠ ಅರ್ಹತೆಯ ಶೇಕಡಾವಾರು ಅಂಕ ಈಗ ಶೇ 40 ರಿಂದ ಶೇ 25ರಷ್ಟು ಕಡಿಮೆಯಾಗಿದೆ. ಆಯೋಗವು ಅನಿರ್ವಾಯವಾಗಿ ಈ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.