ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹೊಸ ಸಚಿವರು, ಬಿಜೆಪಿ ನಾಯಕರು ಮತ್ತು ಎನ್‌ಡಿಎ ಮಿತ್ರಪಕ್ಷಗಳಲ್ಲಿ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಮೋದಿ ಪ್ರಯತ್ನಕ್ಕೆ ಅವರು ಶುಭ ಹಾರೈಸಿದರು. ಭಾರತ ಅಭಿವೃದ್ಧಿ ಮತ್ತು ವೈಭವದ ಹಾದಿಯಲ್ಲಿದೆ ಎಂದು ಅವರೆಲ್ಲ ಹರ್ಷ ವ್ಯಕ್ತಪಡಿಸಿದರು.
ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಮಾತನಾಡಿ, ಪ್ರಧಾನಿ ಮೋದಿ ಅವರು ಮೂರನೇ ಅವಧಿಗೆ ಮತ್ತೊಮ್ಮೆ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ದೇಶಕ್ಕೆ ಹೊಸ ಇತಿಹಾಸ ಬರೆಯುವುದನ್ನು ಸೂಚಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು. ಮಧ್ಯಪ್ರದೇಶದ ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯವರ್ಗಿಯ ಅವರು ಎಲ್ಲರೂ ಹೆಮ್ಮೆಯಿಂದ ವಿಜೃಂಭಿಸುತ್ತಿದ್ದಾರೆ. "ಭಾರತವು ಮತ್ತೊಮ್ಮೆ ವಿಶ್ವ ಗುರುವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
“ಇದೊಂದು ಐತಿಹಾಸಿಕ ಕ್ಷಣ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ಅವರನ್ನು ಅಭಿನಂದಿಸುತ್ತೇನೆ. ದೇಶದ ಎಲ್ಲಾ ಜನರು ಬಯಸಿದಂತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿದ್ದಾರೆ. ನಾನು ನೂತನ ಸಚಿವರು, ಪಕ್ಷದ ಕಾರ್ಯಕರ್ತರು, ಎನ್‌ಡಿಎ ಮಿತ್ರಪಕ್ಷಗಳು ಮತ್ತು ದೇಶದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ‘‘ ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ. ಇನ್ನು ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢ ಸರ್ಕಾರವು ನೂತನ ಪ್ರಧಾನಿ ಮೋದಿ ಸರ್ಕಾರಕ್ಕೆ ಶುಭ ಹಾರೈಸುತ್ತದೆ ಎಂದು ಹೇಳಿದರು.
ಪ್ರಧಾನಿ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ನಂತರ ಅವರ ಭಾವನೆ ಹೇಗಿತ್ತು ಎಂಬ ಪ್ರಶ್ನೆಗೆ ಜಗದ್ಗುರು ರಮಾನಂದಾಚಾರ್ಯ ಸ್ವಾಮಿ ರಾಮಭದ್ರಾಚಾರ್ಯರು ಉತ್ತರಿಸಿ. "ಮೋದಿ ಜೀ ಎಂದೆಂದಿಗೂ ನನ್ನ ಸ್ನೇಹಿತ" ಎಂದು ಸಂತಸ ವ್ಯಕ್ತಪಡಿಸಿದರು.