ನವದೆಹಲಿ: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಯಾವುದೇ ಕ್ರಿಮಿನಲ್ ಮೊಕದ್ದಮೆಯನ್ನು ಮುಂದುವರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಈ ಮೂಲಕ ಕಟೀಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್ನ ಆದರ್ಶ್ ಆರ್.ಅಯ್ಯರ್ ಅವರು ಸಲ್ಲಿಸಿದ ಮೇಲ್ಮನವಿಯನ್ನು ವಿಚಾರಣೆ ಮಾಡಿದ್ದು, ಅಸ್ಪಷ್ಟ ಹಾಗೂ ಸಂಪೂರ್ಣ ಊಹೆಯ ದೂರು ಎಂದು ಹೇಳಿದೆ. ಈ ಮೂಲಕ ಮೇಲ್ಮನವಿಯನ್ನು ವಜಾಗೊಳಿಸಿದೆ.
ಸೂಕ್ತ ಸಾಕ್ಷ್ಯಾಧಾರವಿಲ್ಲದೆ ನಾವು ತನಿಖೆಗೆ ಅವಕಾಶ ನೀಡಲು ಸಾಧ್ಯವಿಲ್ಲ. ಹೈಕೋಟ್ ಆದೇಶದ ಮಧ್ಯೆ ನಾವು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿತು.
ಅದಕ್ಕೆ ಪ್ರತಿಯಾಗಿ ವಕೀಲ ಪ್ರಶಾಂತ್ ಭೂಷಣ್, ಕ್ರಿಮಿನಲ್ ಪ್ರಕರಣವನ್ನು ಈ ರೀತಿಯಾಗಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಾದಿಸಿದರು. ಆದರೆ, ಭವಿಷ್ಯದಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಎಫ್ಐಆರ್ ದಾಖಲಿಸಬಾರದು ಎಂದು ಪೀಠ ಆದೇಶಿಸಿತು.