ನವದೆಹಲಿ: ಕೃಷಿ ತ್ಯಾಜ್ಯ ಸುಡುವಿಕೆಯಿಂದಾಗಿ ಗಾಳಿ ಕಲುಷಿತಗೊಂಡಿದ್ದು, ಉತ್ತರ ಭಾರತದೆಲ್ಲೆಡೆ ವೈದ್ಯಕೀಯ ತುರ್ತುಸ್ಥಿತಿ ಎದುರಿಸುವಂತಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಮಾಲಿನ್ಯದ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಬಿಜೆಪಿ ನೇತೃತ್ವದ ಸರ್ಕಾರವಿರುವ ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶದಲ್ಲಿ ಕೃಷಿ ತ್ಯಾಜ್ಯ ಸುಡುವಿಕೆ ತಡೆಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಆರೋಪಿಸಿದರು.
ಇದೇ ವೇಳೆ, ಎಎಪಿ ನೇತೃತ್ವದ ಪಂಜಾಬ್ ಕಾರ್ಯವನ್ನು ಶ್ಲಾಘಿಸುತ್ತಾ, ಕೃಷಿ ತ್ಯಾಜ್ಯ ಸುಡುವ ಯತ್ನ ಗಣನೀಯವಾಗಿ ಕಡಿಮೆಯಾದ ಏಕೈಕ ರಾಜ್ಯ ಪಂಜಾಬ್. ಆದರೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಇವು ಏರಿಕೆಯಾಗಿವೆ ಎಂದರು.
ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕಳಪೆಯಾಗಿದೆ. ಇದರಿಂದಾಗಿ ಉಸಿರಾಡಲು ಸಮಸ್ಯೆಯಾಗುತ್ತಿದೆ. ವೃದ್ಧರು ಮತ್ತು ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಬೆನ್ನಲ್ಲೇ ಸಿಎಂ ಆತಿಶಿ ಪತ್ರಿಕಾಗೋಷ್ಟಿಯಲ್ಲಿ ಈ ವಿಚಾರಗಳ ಕುರಿತು ಮಾತನಾಡಿದ್ದಾರೆ.