ನವದೆಹಲಿ:ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಕೇಂದ್ರ ಸರ್ಕಾರವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ)ಯ ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ಶನಿವಾರ ಹುದ್ದೆಯಿಂದ ತೆಗೆದುಹಾಕಿದೆ. ಈ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಿಸಲಾಗಿದೆ.
ಪ್ರದೀಪ್ ಸಿಂಗ್ ಖರೋಲಾ ಹೊಸ ಡಿಜಿ:ಪ್ರದೀಪ್ ಸಿಂಗ್ ಖರೋಲಾ ಅವರಿಗೆ ಎನ್ಟಿಎಯ ಹೆಚ್ಚುವರಿ ಡೈರೆಕ್ಟರ್ ಜನರಲ್ ಜವಾಬ್ದಾರಿ ನೀಡಲಾಗಿದೆ. ಸದ್ಯ ಅವರು ಭಾರತೀಯ ವ್ಯಾಪಾರ ಉತ್ತೇಜನಾ ಸಂಸ್ಥೆಯ (ಐಟಿಪಿಐ) ಅಧ್ಯಕ್ಷ ಮತ್ತು ಎಂಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.