ಕರ್ನಾಟಕ

karnataka

ETV Bharat / bharat

ಕಾಸರಗೋಡು ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ; 150 ಮಂದಿಗೆ ಗಾಯ, 8 ಮಂದಿ ಗಂಭೀರ - FIREWORKS ACCIDENT

ಕೇರಳದ ಕಾಸರಗೋಡು ದೇವಸ್ಥಾನದ ಉತ್ಸವದ ವೇಳೆ ನಡೆದ ಪಟಾಕಿ ಅವಘಡದಲ್ಲಿ 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದು ತಿಳಿದುಬಂದಿದೆ.

fireworks
ಪಟಾಕಿ (ETV Bharat (ಸಂಗ್ರಹ ಚಿತ್ರ))

By PTI

Published : Oct 29, 2024, 6:51 AM IST

ಕಾಸರಗೋಡು (ಕೇರಳ) :ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು 150 ಮಂದಿಗೆ ಗಾಯವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂಬುದಾಗಿ ವರದಿಯಾಗಿದೆ. ಬೆಂಕಿ ಕಿಡಿಯಿಂದ ಪಟಾಕಿ ಸ್ಪೋಟಗೊಂಡಿದೆ ಎಂಬುದು ತಿಳಿದುಬಂದಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆ ಹಾಗೂ ನೀಲೇಶ್ವರ ಮತ್ತು ಕಾಞಂಗಾಡ್‌ನ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕಾಸರಗೋಡು ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ (ETV Bharat)

ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ :ಪಟಾಕಿ: ಬೆಂಗಳೂರಿನಲ್ಲಿ 70ಕ್ಕೂ ಹೆಚ್ಚು ಜನರಿಗೆ ಗಾಯ

ABOUT THE AUTHOR

...view details