ಮಲಪ್ಪುರಂ (ಕೇರಳ): ಮಲಪ್ಪುರಂನ ಅರೀಕೋಡ್ ಬಳಿಯ ಫುಟ್ಬಾಲ್ ಮೈದಾನದಲ್ಲಿ ಸೋಮವಾರ ಪಟಾಕಿ ಸಿಡಿಸಿದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಫುಟ್ಬಾಲ್ ಪಂದ್ಯಕ್ಕೂ ಮುನ್ನ ಮೈದಾನದಲ್ಲಿ ಪಟಾಕಿ ಸಿಡಿತ: 30ಕ್ಕೂ ಹೆಚ್ಚು ಮಂದಿಗೆ ಗಾಯ - 30 INJURED IN FIRECRACKER EXPLOSION
ಕೇರಳದ ಮಲಪ್ಪುರಂನ ಅರೀಕೋಡ್ ಎಂಬಲ್ಲಿ ಫುಟ್ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಸಿಡಿಸಿದ ಪಟಾಕಿಯಿಂದ ಹಲವರು ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಫುಟ್ಬಾಲ್ ಪಂದ್ಯಕ್ಕೂ ಮುನ್ನ ಮೈದಾನದಲ್ಲಿ ಪಟಾಕಿ ಸಿಡಿತ: 30ಕ್ಕೂ ಹೆಚ್ಚು ಮಂದಿ ಗಾಯ (ANI)
By ANI
Published : Feb 19, 2025, 6:40 AM IST
ಇಲ್ಲಿನ ಅರೀಕೋಡು ಪೊಲೀಸರ ಪ್ರಕಾರ, "ಫುಟ್ಬಾಲ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಲಾಗಿದೆ. ಈ ವೇಳೆ ಸಿಡಿದ ಪಟಾಕಿ ಮೈದಾನ ತುಂಬಾ ಹರಡಿದ್ದರಿಂದ ಪಂದ್ಯ ವೀಕ್ಷಿಸಲು ಬಂದಿದ್ದ ಸಾರ್ವಜನಿಕರಿಗೆ ಗಾಯಗಳಾಗಿವೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಗಂಭೀರ ಗಾಯಗಳು ವರದಿಯಾಗಿಲ್ಲ" ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮದುವೆ ಮುಗಿಸಿ ಮರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಸಾವು