ನವದೆಹಲಿ: ಸಂವಿಧಾನದ 75ನೇ ವರ್ಷಾಚರಣೆ ನಿಮಿತ್ತ ಲೋಕಸಭೆಯಲ್ಲಿ ಇಂದಿನಿಂದ ಎರಡು ದಿನಗಳ ಚರ್ಚೆ ಆರಂಭವಾಗಲಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ. ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪ್ರಯಾಣದ ಕುರಿತು ಚರ್ಚೆ ನಡೆಯಲಿದೆ ಎಂದು ಬಿಸಿನೆಸ್ ಲಿಸ್ಟ್ನಲ್ಲಿ ಉಲ್ಲೇಖಿಸಲಾಗಿದೆ.
ಸದಸ್ಯರಿಗೆ ವಿಪ್ ಜಾರಿ:ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂವಿಧಾನದ ಕುರಿತ ಚರ್ಚೆಗೆ ಚಾಲನೆ ನೀಡಲಿದ್ದಾರೆ. ಡಿಸೆಂಬರ್ 13 - 14 ರಂದು ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲ ಸದಸ್ಯರಿಗೆ ಮೂರು ಸಾಲಿನ ವಿಪ್ ಜಾರಿ ಮಾಡಿವೆ.
ಸದನದ ಅಜೆಂಡಾದಲ್ಲಿ ಪಟ್ಟಿ ಮಾಡಲಾದ ಪ್ರಶ್ನೋತ್ತರ ಅವಧಿಯ ನಂತರ ಚರ್ಚೆಗಳು ಪ್ರಾರಂಭವಾಗಲಿವೆ. ಲೋಕಸಭೆಯ ವೇಳಾಪಟ್ಟಿಯ ಪ್ರಕಾರ, ಏಳು ಸಚಿವರು ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ವರದಿಗಳನ್ನು ಮಂಡಿಸಲಿದ್ದಾರೆ.
ಎರಡೂ ಪಕ್ಷಗಳಿಂದ ಸಭೆ:ಇಂದಿನ ಕಲಾಪಗಳ ಕುರಿತು ಎರಡೂ ಪ್ರಮುಖ ಪಕ್ಷಗಳು ತಮ್ಮ ಕಾರ್ಯತಂತ್ರದ ಸಭೆಗಳನ್ನು ನಡೆಸಿವೆ. ಪಿಎಂ ಮೋದಿ ನೇತ್ವತದಲ್ಲಿ ಬಿಜೆಪಿ ಸಭೆ ನಡೆಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜೊತೆಗೆ ಗೃಹ ಸಚಿವ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಈ ಸಭೆಯಲ್ಲಿ ಭಾಗವಹಿಸಿದ್ದರು. ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಿರಿಯ ಸಚಿವರು ಸಭೆಯಲ್ಲಿ ಪಾಲ್ಗೊಂಡರು.