ನೀಲಗಿರಿ(ತಮಿಳುನಾಡು): ಪಿಕ್ ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾದ ಘಟನೆ ಜಿಲ್ಲೆಯ ಕೂನೂರು - ಕೊತ್ತಗಿರಿ ರಸ್ತೆಯಲ್ಲಿ ನಡೆದಿದೆ. ಅದೃಷ್ಟವಶಾತ್ ವಾಹನದಲ್ಲಿದ್ದ 21 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪಿಕ್ಅಪ್ ವಾಹನ: 21 ಮಂದಿಗೆ ಗಾಯ - pickup van overturns - PICKUP VAN OVERTURNS
ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಪಿಕ್ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಪಲ್ಟಿಯಾದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
Published : May 20, 2024, 9:08 PM IST
ನಿನ್ನೆ (ಭಾನುವಾರ) ಕುನ್ನೂರು - ಕೋಟಗಿರಿ ರಸ್ತೆಯಲ್ಲಿರುವ ಪೆಟ್ಟಾಟಿಗೆ ಜನರನ್ನು ಪಿಕ್ ಅಪ್ ವಾಹನ ಕರೆದೊಯ್ಯುತ್ತಿತ್ತು. ಆ ವೇಳೆ, ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ವಾಹನ ಹಿಮ್ಮುಖವಾಗಿ ಚಲಿಸಿ ಸಮೀಪದ ಕಂದಕಕ್ಕೆ ಪಲ್ಟಿಯಾಗಿದೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಓಡಿ ಬಂದು ಜನರನ್ನು ರಕ್ಷಿಸಿದ್ದಾರೆ. ಅಲ್ಲದೇ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು, ಮಕ್ಕಳು ಸೇರಿದಂತೆ 11 ಮಂದಿಯನ್ನು ಚಿಕಿತ್ಸೆಗಾಗಿ ಕುನ್ನೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ವಾಹನದಲ್ಲಿದ್ದ ಎಲ್ಲ ಪ್ರಯಾಣಿಕರು ಆಂಧ್ರಪ್ರದೇಶದಿಂದ ಉತ್ಕೈ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಅಥಣಿ ಮೂಲದ ಕ್ರೂಸರ್ ಪಲ್ಟಿ: ಮೂವರು ಮಹಿಳೆಯರ ಸಾವು - Accident