ಕರ್ನಾಟಕ

karnataka

By ETV Bharat Karnataka Team

Published : Jan 22, 2024, 7:14 PM IST

Updated : Jan 22, 2024, 8:30 PM IST

ETV Bharat / bharat

ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ; ರಾಮಲಲ್ಲಾ ಪ್ರತಿಷ್ಠಾಪನೆ ದಿನವೇ ಪ್ರಧಾನಿಯಿಂದ ಹೊಸ ಘೋಷಣೆ

ರಾಮಮಂದಿರ ಉದ್ಘಾಟನೆಯ ದಿನದಂದೇ ಪ್ರಧಾನಿ ಮೋದಿ ಅವರಿಂದ ಹೊಸ ಯೋಜನೆಯ ಘೋಷಣೆಯಾಗಿದೆ.

ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಘೋಷಣೆ
ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಘೋಷಣೆ

ನವದೆಹಲಿ:ಅಯೋಧ್ಯೆಯ ಭವ್ಯ ರಾಮಮಂದಿರ ಉದ್ಘಾಟನೆ ಜೊತೆ ರಾಮಲಲ್ಲಾ ಪ್ರತಿಷ್ಠಾಪನೆ ಮುಗಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ಯೋಜನೆಯೊಂದನ್ನು ಘೋಷಣೆ ಮಾಡಿದೆ. 'ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ' ಎಂಬ ಹೊಸ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಯೋಜನೆಯಡಿ ಒಂದು ಕೋಟಿ ಮನೆಗಳಿಗೆ ಸೌರಫಲಕಗಳನ್ನು ಅಳವಡಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿ, "ಜಗತ್ತಿನ ಎಲ್ಲಾ ಭಕ್ತರು ಸೂರ್ಯನ ವಂಶಸ್ಥ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯಲ್ಲಿ ಪ್ರಾಣ-ಪ್ರತಿಷ್ಠೆಯ ಶುಭ ಸಂದರ್ಭದಲ್ಲಿ, ನನ್ನ ಸಂಕಲ್ಪ ಮತ್ತಷ್ಟು ಬಲಗೊಂಡಿದೆ. ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅಳವಡಿಸುವ ಗುರಿಯೊಂದಿಗೆ "ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ" ಅನ್ನು ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:ಅಯೋಧ್ಯಾ ರಾಮ ಮಂದಿರ ನಿರ್ಮಿಸಿದ ಕಾರ್ಮಿಕರ ಮೇಲೆ ಪ್ರಧಾನಿ ಮೋದಿ ಪುಷ್ಪವೃಷ್ಟಿ

Last Updated : Jan 22, 2024, 8:30 PM IST

ABOUT THE AUTHOR

...view details