ನವದೆಹಲಿ: ಮಿಷನ್ ದಿವ್ಯಾಸ್ತ್ರ ಅಗ್ನಿ - 5 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಡಿಆರ್‌ಡಿಒ ವಿಜ್ಞಾನಿಗಳನ್ನು ಶ್ಲಾಘಿಸಿದ್ದಾರೆ.
ಈ ಕುರಿತಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಹಲವು ಗುರಿಗಳನ್ನು ಸ್ವತಂತ್ರವಾಗಿ ಭೇದಿಸಿ ಮತ್ತೆ ವಾಪಸ್ ಆಗುವ ಕ್ಷಿಪಣಿ ವಾಹಕ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಲಾದ ಅಗ್ನಿ - 5 ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದೆ. ಮಿಷನ್ ದಿವ್ಯಾಸ್ತ್ರ ಯಶಸ್ವಿಗೊಳಿಸಿದ ನಮ್ಮ ಡಿಆರ್‌ಡಿಒ ವಿಜ್ಞಾನಿಗಳ ಸಾಧನೆ ಹೆಮ್ಮೆ ತಂದಿದೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.