ನವದೆಹಲಿ:ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಿಮೋರ್ ದೇಶದ ಅತ್ಯುನ್ನತ ನಾಗರಿಕ ಗೌರವವಾದ 'ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ತಿಮೋರ್-ಲೆಸ್ಟ್' ನೀಡಿ ಗೌರವಿಸಲಾಯಿತು. ಶಿಕ್ಷಣ, ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಸಾರ್ವಜನಿಕ ಸೇವೆಯಲ್ಲಿನ ಅವರ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.
''ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗ್ರ್ಯಾಂಡ್ ಕಾಲರ್ ಆಫ್ ದಿ ಆರ್ಡರ್ ಆಫ್ ತಿಮೋರ್-ಲೆಸ್ಟ್ ಪ್ರಶಸ್ತಿ ನೀಡಿರುವುದು ದೇಶದ ಜನತೆಗೆ ಹೆಮ್ಮೆಯ ಕ್ಷಣವಾಗಿದೆ'' ಎಂದು ರಾಷ್ಟ್ರಪತಿಯವರನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಭಿನಂದಿಸಿದ್ದಾರೆ. ಇದು ಉಭಯ ದೇಶಗಳ ನಡುವಿನ ಬಲವಾದ ಸಂಬಂಧ ಮತ್ತು ಪರಸ್ಪರ ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದು ಮೋದಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.