ಕರ್ನಾಟಕ

karnataka

ETV Bharat / bharat

ನಳಂದಾ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ - Nalanda University New Campus

ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ಗಿರ್‌ನಲ್ಲಿಂದು ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದರು.

ನಳಂದಾ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್  ಉದ್ಘಾಟಿಸಿದ ಪ್ರಧಾನಿ ಮೋದಿ
ನಳಂದಾ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ (ETV Bharat)

By PTI

Published : Jun 19, 2024, 10:57 PM IST

ರಾಜ್‌ಗಿರ್‌(ಬಿಹಾರ): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್‌ಗಿರ್‌ನಲ್ಲಿ ಇಂದು ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ರಾಜೇಂದ್ರ ವಿ.ಅರ್ಲೇಕರ್, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಉಪಸ್ಥಿತರಿದ್ದರು.

ಹೊಸ ಕ್ಯಾಂಪಸ್ ಉದ್ಘಾಟಿಸುವ ಮೊದಲು, ಮೋದಿ ವಿಶ್ವವಿದ್ಯಾನಿಲಯದ ಸಮೀಪದಲ್ಲಿರುವ ಯುನೆಸ್ಕೋ ವಿಶ್ವ ಪರಂಪರೆಯ ತಾಣ ನಳಂದ ಮಹಾವಿಹಾರಕ್ಕೆ ಭೇಟಿ ನೀಡಿದರು.

ಈ ಶಿಕ್ಷಣ ಸಂಸ್ಥೆಯನ್ನು 2010ರಲ್ಲಿ ನಳಂದ ವಿಶ್ವವಿದ್ಯಾಲಯ ಕಾಯ್ದೆಯ ಮೂಲಕ ಸ್ಥಾಪಿಸಲಾಗಿತ್ತು. 2014ರಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿತ್ತು.

ಐದನೇ ಶತಮಾನದಿಂದಲೂ ಅಸ್ತಿತ್ವದಲ್ಲಿದ್ದ ಪ್ರಾಚೀನ ನಳಂದ ವಿಶ್ವವಿದ್ಯಾಲಯವು ಪ್ರಪಂಚದಾದ್ಯಂತದ ವಿದ್ಯಾರ್ಥಿಗಳನ್ನು ಆಕರ್ಷಿಸಿತ್ತು. ತಜ್ಞರ ಪ್ರಕಾರ, ಇದು 12ನೇ ಶತಮಾನದಲ್ಲಿ ಮುಸ್ಲಿಂ ಆಕ್ರಮಣಕಾರರಿಂದ ನಾಶವಾಗುವ 800 ವರ್ಷಗಳ ಮೊದಲು ಪ್ರವರ್ಧಮಾನಕ್ಕೆ ಬಂದಿತ್ತು.

ಇದನ್ನೂ ಓದಿ:ಮುಂಗಾರು ಹಂಗಾಮಿನ 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿದ ಕೇಂದ್ರ; ಭತ್ತಕ್ಕೆ ₹117 ಹೆಚ್ಚಳ - MSP for Kharif Crops

ABOUT THE AUTHOR

...view details